ನೈತಿಕತೆ ಪಾಠ ಮಾಡುವ ಸಿದ್ರಾಮಯ್ಯ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ: ಮಾಜಿ ಶಾಸಕ ಸೋಮಶೇಖರ ರೆಡ್ಡಿ

Upayuktha
0


ಬಳ್ಳಾರಿ: ಮುಡಾ ಹಗರಣಕ್ಕೆ ಸಂಬಂಧ ಪಟ್ಟ ಕಾನೂನಿನ ತನಿಖೆಗೆ ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ  ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.


ಬಳ್ಳಾರಿ ರಾಯಲ್ ವೃತ್ತದಲ್ಲಿ ಮಂಗಳವಾರ ಬಿಜೆಪಿಯ ನೂರಾರು ಕಾರ್ಯಕರ್ತರು ಜಮಾವಣೆಗೊಂಡು ಘೋಷಣೆ ಕೂಗುತ್ತಾ ರಾಜೀನಾಮೆಗೆ ಪಟ್ಟು ಹಿಡಿದರು. 


ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನ ದಿಂದ ಕೆಳಗೆ ಸ್ವತಃ ತಾವೇ ಇಳಿದು ಇನ್ನೊಬ್ಬರಿಗೆ ಮಾದರಿ ಯಾಗಬೇಕು ಎಂದು ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಒತ್ತಾಯಿಸಿದರು.


ಭ್ರಷ್ಟಾಚಾರದಿಂದ ಕೂಡಿರುವ ಕಾಂಗ್ರೆಸ್ ಸರ್ಕಾರದ ಬಹಳ ದಿನಗಳು ರಾಜ್ಯದಲ್ಲಿ ಉಳಿಯುವುದಿಲ್ಲ, ಬಹಳ ಬೇಗನೆ ತಾನಾಗಿಯೇ ಸರ್ಕಾರ ಅಸ್ತಿತ್ವವನ್ನು ಕಳೆದು ಕೊಳ್ಳುತ್ತದೆ ಎಂಬುದು ಹೇಳಿದರು.

ಎಂಎಲ್ಸಿ ಸತೀಶ್,  ಜಿಲ್ಲಾಧ್ಯಕ್ಷ  ಅನಿಲ್ ನಾಯ್ಡು, ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top