ಬಳ್ಳಾರಿ:ಮುಡಾ ತನಿಖೆ ಎದುರಿಸಲು ಸಿದ್ದರಾಮಯ್ಯ ಅವರುಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದಾರೆ. ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು. ಸಿದ್ದರಾಮಯ್ಯ ಅವರೇ ಅನೇಕ ಬಾರಿ ಸದನದಲ್ಲಿ ಯಾರೇ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಗುರಿಯಾದಾಗ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದ್ದರು. ಅದರಂತೆ ಅಧಿಕಾರದಲ್ಲಿದ್ದು ತನಿಖೆ ಎದುರಿಸುವುದು ನೈತಿಕತೆಗೆ ಧಕ್ಕೆ ಆಗಲಿದೆ. ಹೀಗಾಗಿ ರಾಜೀನಾಮೆ[ ನೀಡಬೇಕೆಂದು ಒತ್ತಾಯಿಸಿದರು.
ಇಡಿ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಪಿಎ ವಿಜಯಕುಮಾರ್ ಬರೆದಿಟ್ಟುಕೊಂಡತೆ. ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳಕೆಯಾಗಿದೆ ಅದಕ್ಕಾಗಿ ಸಂಸದ ಸ್ಥಾನಕ್ಕೆ ತುಕರಾಂ ಅವರು ರಾಜೀನಾಮೆ ನೀಡಬೇಕು ಎಂದರು. ಸಿಬಿಐ ಇನ್ನು ಮುಂದೆ ನೇರವಾಗಿ ಯಾವುದೇ ಪ್ರಕರಣದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರದ ಅನುಮತಿಪಡೆಯಬೇಕು ಎಂಬುದು ತಾವು ಮಾಡಿದ ಭ್ರಷ್ಟತೆಯನ್ನು ಮುಚ್ಚಿಕೊಳ್ಳಲು ಮಾಡಿದ ಪ್ರಯತ್ನವಾಗಿದೆ ಎಂದು ಟೀಕಿಸಿದರು. ಈ ಸಂಧರ್ಬದಲ್ಲಿ ಎಮ್ಮೆಲ್ಸಿ ವೈ.ಎಂ.ಸತೀಶ್,ಓಬಳೇಶ್,ಅನಿಲ್‌ನಾಯುಡು,ಮಲ್ಲೇಶ್ ಇನ್ನಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ