ಮಂಗಳೂರು: ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಹಾಗೂ ಆರೋಗ್ಯ ಜಾಗೃತಿ ಮತ್ತು ಪರಿಸರ ಸ್ನೇಹಿ ಗಣಪ ಜಾಗೃತಿಯನ್ನು ಮನೆಮನೆ ಹಾಗೂ ಅಂಗಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅರಿವು ಮೂಡಿಸಿದ ಸನ್ನಿಧಿ ಕಶೆ ಕೋಡಿ ಬಾಲಕಿಯನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಇವಳ ಕೆಲಸ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನೀವು ವಿಧಾನಸಭಾ ಅಧ್ಯಕ್ಷರಾಗಿ ಒಳ್ಳೆಯ ರೀತಿ ಕೆಲಸ ಮಾಡುತ್ತಿದ್ದು ಮುಂದೆ ನೀವು ರಾಷ್ಟ್ರಮಟ್ಟದಲ್ಲೂ ಇಂತಹ ಹೆಸರು ಮಾಡಿ ನಮ್ಮ ಊರಿನ ಕೀರ್ತಿ ಪತಾಕೆ ಹಾರಿಸಬೇಕಾಗಿ ಕೇಳಿಕೊಂಡಳು. ಇದಕ್ಕೆ ವಿಧಾನಸಭಾಧ್ಯಕ್ಷರು ನೀನು ಕೂಡ ದೇಶದಲ್ಲಿ ಒಳ್ಳೆಯ ಹೆಸರು ಮಾಡ್ತೀಯಾ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬಾಲಕಿಯ ತಂದೆ ಲೋಕೇಶ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಇಂದಾಜೆ ಉಪಾಧ್ಯಕ್ಷ ಭಾಸ್ಕರ್ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


