ಶಿಕ್ಷಕಿ ಸಂಗೀತ ಶರ್ಮ ಪಿ.ಜಿ ಅವರಿಗೆ ರಾಜ್ಯಮಟ್ಟದ "ಶಿಕ್ಷಕರತ್ನ" ಪ್ರಶಸ್ತಿ

Upayuktha
0


ಬಂಟ್ವಾಳ: ಕಲಾ ಸಂಕುಲ ಸಂಸ್ಥೆ (ರಿ.) ರಾಯಚೂರು ಇವರ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ ಸೆಪ್ಟೆಂಬರ್ 8 ರಂದು ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ  ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರನ್ನು ಆಯ್ಕೆ ಮಾಡಲಾಗಿದೆ.


ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ  ಹೊಂದಿರುವುದನ್ನು ಗುರುತಿಸಿ ರಾಜ್ಯಮಟ್ಟದ "ಶಿಕ್ಷಕರತ್ನ" ಪ್ರಶಸ್ತಿ ನೀಡಿ ಗೌರವಿಸಲಾಗುವುದು. 


ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ರಾಯಚೂರು ಸಂಸದ ಜಿ ಕುಮಾರ್ ನಾಯಕ್ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷರಾದ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top