ಸುರತ್ಕಲ್: ವಿಜ್ಞಾನ ಮತ್ತು ಆಧ್ಯಾತ್ಮಕತೆಯು ಅವಿನಾಭಾವ ಸಂಬಂಧ ಹೊಂದಿದ್ದು ಭಾರತೀಯ ಋಷಿಮುನಿಗಳು ಆಧ್ಯಾತ್ಮಿಕತೆಯ ಮೂಲಕ ಅನೇಕ ವೈಜ್ಞಾನಿಕ ವಿಷಯಗಳನ್ನು ಪ್ರಪಂಚಕ್ಕೆ ಪರಿಚಯಿಸಿದ್ದಾರೆ. ಇಂದಿನ ವಿದ್ಯಾರ್ಥಿಗಳು ಲೌಕಿಕ ಜ್ಞಾನದ ಜೊತೆಗೆ ಆಧ್ಯಾತ್ಮಿಕ ಜ್ಞಾನವನ್ನೂ ಗಳಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಭಗವದ್ಗೀತೆಯ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ ಎಂದು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನ, ಕುಳಾಯಿಯ ಅಧ್ಯಕ್ಷ ಶ್ರೀ ನಾಮ ನಿಷ್ಠ ದಾಸ್ ನುಡಿದರು.
ಅವರು ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ವಿದ್ಯಾರ್ಥಿ ಸೆನೆಟ್ ಆಯೋಜಿಸಿದ್ದ ಮೌಲ್ಯ ಶಿಕ್ಷಣ ಕಾರ್ಯಕ್ರಮ ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ಪ್ರಸ್ತುತ ಧಾವಂತದ ಕಾಲಘಟ್ಟದಲ್ಲಿ ವಿಜ್ಞಾನದಷ್ಟೇ ಆಧ್ಯಾತ್ಮಕತೆಯು ಮಹತ್ವವನ್ನು ಪಡೆಯುತ್ತಿದ್ದು ಒತ್ತಡ, ಅಶಾಂತಿ ಗಳಿಂದ ತುಂಬಿದ ಮನಸ್ಸುಗಳನ್ನು ಚೇತೋಹಾರಿಯಾಗಿಸಲು ಆಧ್ಯಾತ್ಮಕವು ಸಹಾಯಕವಾಗುತ್ತದೆ ಎಂದರು.ಅನನ್ಯ ಸ್ವಾಗತಿಸಿ ಹೇಮಂತ್ ವಂದಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ. ಎಂ.ಎಸ್ಸಿ. ಸ್ಟಾಫ್ ಸೆಕ್ರಟರಿ ಗೀತಾ ಕೆ. ಮತ್ತಿತರರು ಉಪಸ್ಥಿತರಿದ್ದರು. ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ