“ಸ್ವಚ್ಛತಾ ಹಿ ಸೇವಾ ಅಭಿಯಾನ” - ಸ್ವಚ್ಛತೆಗೆ ಆದ್ಯತೆ ನೀಡೋಣ: ವಿನೋದ್ ಕುಮಾರ್

Upayuktha
0


ಬಳ್ಳಾರಿ: 
ಸ್ವಚ್ಚತೆ ಕಾಪಾಡುವಲ್ಲಿ ನಮ್ಮನ್ನು ನಾವು ಮನಪೂರ್ವಕವಾಗಿ ತೊಡಗಿಸಿಕೊಂಡರೆ ರೋಗ ರುಜಿನಗಳಿಂದ ಮುಕ್ತರಾಗಬಹುದು. ಮನೆಯಿಂದ ಗ್ರಾಮ, ಗ್ರಾಮದಿಂದ ರಾಷ್ಟ್ರಮಟ್ಟದವರಗೆ ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ವಿನೋದ್ ಕುಮಾರ್ ಅವರು ಹೇಳಿದರು. 


ಜಿಲ್ಲಾ ಪಂಚಾಯತ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಇವರ ಸಹಯೋಗದಲ್ಲಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸ್ವಚ್ಛತಾ ಹಿ ಸೇವಾ ಅಭಿಯಾನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. 


ಕೆನೆರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕರಾದ ಡಿವಿಪಿಆರ್ ಮುರಳಿ ಕೃಷ್ಣ ಮಾತನಾಡಿ, ಸ್ವಚ್ಛತೆ ಎಂಬುದು ನಮ್ಮ ಮನೆಯಿಂದ ಪ್ರಾರಂಭವಾಗಬೇಕು ಇದರಲ್ಲಿ ನಾವೂ ಪ್ರತಿನಿತ್ಯ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. 


ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಲ್‌ಡಿಎಮ್ ಗಿರೀಶ್ ವಿ.ಕುಲಕರ್ಣಿ ಮಾತನಾಡಿ, ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದರ ಜೊತೆಗೆ ತ್ಯಾಜ್ಯ ವಸ್ತುಗಳ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರವನ್ನಾಗಿ ಮಾಡಲು ಎಲ್ಲರೂ ಶ್ರಮಿಸೋಣ ಎಂದು ತಿಳಿಸಿದರು. 


ಈ ವೇಳೆ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ರಾಜೇಶ್, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಹೆಚ್.ಎರಿಮನಿ, ಆರ್ಥಿಕ ಸಮಾಲೋಚಕರಾದ ದಿನೇಶ್,  ಜಡೆಪ್ಪ, ಚೆನ್ನಪ್ಪ, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ 30 ಜನ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top