ಎಸ್‌ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು. ಎಲ್ಲ ಉಪನ್ಯಾಸಕರು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.


ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು. 


ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರಗಳನ್ನು ನೀಡಿ ಶುಭಾಶಯ ಕೋರಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top