ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿ: ರೋಟರಿ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ

Upayuktha
0

 ವನಿತಾ ಪಾರ್ಕ್‌ನಲ್ಲಿ ತುಳು ಕವಿಗೋಷ್ಠಿ




ಮಂಗಳೂರು: ತುಳುನಾಡಿನ ಜನತೆ ತುಳು ಭಾಷೆಯ ಜತೆ ಇತರ ಭಾಷೆಗಳನ್ನು ಗೌರವಿಸುತ್ತಾರೆ. ಎಲ್ಲ ಜನರನ್ನು ತಮ್ಮವರಂತೆ ನೋಡಿಕೊಳ್ಳುವ ತುಳುವರ ಹೃದಯ ವೈಶಾಲ್ಯತೆ ದೇಶಕ್ಕೆ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ಇದರ ಅಸಿಸ್ಟೆಂಟ್ ಗವರ್ನರ್ ಕೆ.ಎಂ.ಹೆಗ್ಡೆ ಹೇಳಿದರು.


ತುಳುವೆರೆ ಕಲ ಇದರ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಭಾನುವಾರ ನಗರದ ಲಾಲ್ಬಾಗ್‌ನ ಇಂದಿರಾ ಪ್ರಿಯದರ್ಶಿನಿ ವನಿತಾಪಾರ್ಕ್‌ನಲ್ಲಿ ನಡೆದ ‘ಪಚ್ಚೆ ಸಿರಿ‘ ತುಳು ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.


ಮುಖ್ಯ ಅತಿಥಿಯಾಗಿದ್ದ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ತುಳು ಭಾಷೆಗೆ ಸಂಬಂಧಿಸಿದ ಸಾಹಿತ್ಯ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದರು.


ಅಧ್ಯಕ್ಷತೆ ವಹಿಸಿದ್ದ ತುಳುವೆರೆ ಕಲದ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ಮಾತನಾಡಿ ‘ತುಳು ಲಿಪಿಯೇ ಭಾಷೆಯ ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿದೆ. ತುಳು ಲಿಪಿ ಕಲಿಕೆ ಜತೆಗೆ ತುಳುವಿನ ಮೂಲ ಶಬ್ದಗಳನ್ನೇ ಬಳಸುವ ಮೂಲಕ ಭಾಷೆಯ ಸೊಗಡು ಉಳಿಸಲು ಪ್ರಯತ್ನಿಸಬೇಕು ಎಂದರು.


ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top