ಆರೋಗ್ಯವೇ ಎಲ್ಲದಕ್ಕೂ ಮೂಲ ಆಧಾರ: ಡಾ. ಖಾದರ್ ವಲ್ಲಿ
ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸೆ. 9 ರಂದು ಮನಃಶಾಸ್ತ್ರ ವಿಭಾಗದ (ಪದವಿ, ಸ್ನಾತಕೋತ್ತರ ಪದವಿ) ವತಿಯಿಂದ ಆಯೋಜಿಸಲಾಗಿದ್ದ 'ಸಿರಿಧಾನ್ಯ ಮತ್ತು ಮಾನಸಿಕ ಆರೋಗ್ಯ' ಕುರಿತ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
“ಇಂದಿನ ಆಧುನಿಕ ಯುಗದಲ್ಲಿ ಜನರು ಫಾಸ್ಟ್ ಫುಡ್ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ದೇಹದಲ್ಲಿ ಹಾರ್ಮೋನ್ ಗಳ ಅಸಮತೋಲನ ಉಂಟಾಗುತ್ತಿದೆ. ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸುತ್ತಿಲ್ಲ. ಪೌಷ್ಟಿಕ ಆಹಾರ ಸೇವಿಸುವ ಬದಲು ಅಪೌಷ್ಟಿಕ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದಾರೆ. ಇದರಿಂದಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರುಪೇರಾಗುತ್ತಿದೆ. ಅನೇಕ ಜನರು ಥೈರಾಯಿಡ್ ಮಧುಮೇಹ ರಕ್ತದೊತ್ತಡದಂತಹ ಬಳಲುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಜನರು ಸಿರಿಧಾನ್ಯಗಳನ್ನು ತಮ್ಮ ನಿತ್ಯ ದಿನನಿತ್ಯ ಆಹಾರ ಪದ್ಧತಿಯಲ್ಲಿ ಉಪಯೋಗಿಸಬಹುದು" ಎಂದರು. ಅನೇಕ ಸಿರಿಧಾನ್ಯಗಳ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಇನ್ನೋರ್ವ ಅತಿಥಿ, ಶಿವಮೊಗ್ಗದ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಡಾ. ಪ್ರೀತಿ ವಿ. ಶಾನಭಾಗ್ ಮಾತನಾಡಿ, "ಹಿಂದಿನ ಕಾಲದಲ್ಲಿ ಆರೋಗ್ಯದ ಏರುಪೇರಿಗೆ ಔಷಧಿಗಳಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಔಷಧಿಗಳ ಜೊತೆಗೆ ಕಾಯಿಲೆಗಳು ಹೆಚ್ಚಾಗಿವೆ. ಈಗಿನ ಕಾಲದಲ್ಲಿ ತ್ವರಿತ ಪರಿಣಾಮವನ್ನು ಬಯಸುತ್ತೇವೆ. ಒಂದು ಕೆಲಸ ಆಗುವ ಮುನ್ನವೇ ಇನ್ನೊಂದು ಕೆಲಸದ ಏಳಿಗೆಗೆ ಹೆಜ್ಜೆ ಹಾಕಲು ತಯಾರಾಗಿರುತ್ತೇವೆ. ಅಧ್ಯಯನದ ಪ್ರಕಾರ ಇತ್ತೀಚಿನ ಜನಾಂಗದಲ್ಲಿ ತಾಳ್ಮೆ ಕಡಿಮೆಯಾಗಿ ಎಲ್ಲವನ್ನು ಶೀಘ್ರವಾಗಿ ಮುಗಿಸಬೇಕೆಂಬ ಒತ್ತಡ ಹೆಚ್ಚಾಗಿದೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, ಮಾನವ ದೇಹವೇ ಒಂದು ರಾಸಾಯನಿಕ ವ್ಯವಸ್ಥೆ. ಹಾಗೆ ಈ ಎಲ್ಲ ರಾಸಾಯನಿಕಗಳು ನಾವು ಹೇಗೆ ಯೋಚಿಸುತ್ತೇವೆ, ಹೇಗೆ ವರ್ತಿಸುತ್ತೇವೆ, ಹೇಗೆ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸುತ್ತವೆ ಎಂದು ಹೇಳಿದರು.-ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಕಲಾ ನಿಕಾಯದ ಡೀನ್ ಡಾ. ಶ್ರೀಧರ ಎನ್. ಭಟ್, ವಿಜ್ಞಾನ ನಿಕಾಯದ ಡೀನ್ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು.-ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ರಾಜ್ಯದ ವಿವಿಧೆಡೆಯ 15 ಕಾಲೇಜುಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು.ಅನನ್ಯ ಬಳಗದವರು ಪ್ರಾರ್ಥಿಸಿದರು. ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಜೈನ್ ಸ್ವಾಗತಿಸಿ, ಎಂ.ಎಸ್. ಸಿಂದು ವಂದಿಸಿದರು. ಸೀಮಾ ಜಂಗೀರ್ ಮತ್ತು ಜಾನವಿ ಎಮ್. ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ