ಅರಳುಮಲ್ಲಿಗೆ ಪಾರ್ಥಸಾರಥಿಯವರಿಗೆ ವಿಷ್ಣುಗುಪ್ತ ರಾಷ್ಟ್ರೀಯ ಸಮ್ಮಾನ ನಾಳೆ

Upayuktha
0


ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್ ವತಿಯಿಂದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಅನುಗ್ರಹಿಸುವ ವಿಷ್ಣುಗುಪ್ತ ರಾಷ್ಟ್ರೀಯ ಸಮ್ಮಾನಕ್ಕೆ ಈ ಬಾರಿ ಖ್ಯಾತ ವಾಗ್ಮಿ, ಚಿಂತಕ ಮತ್ತು ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್ ಸಂಸ್ಥಾಪಕ ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಆಯ್ಕೆಯಾಗಿದ್ದಾರೆ.


ಪ್ರಶಸ್ತಿ ಪ್ರದಾನ ಸಮಾರಂಭ ಈ ತಿಂಗಳ 10ರಂದು ಮಧ್ಯಾಹ್ನ 2.00 ಗಂಟೆಗೆ ಗೋಕರ್ಣ ಅಶೋಕೆಯ ಗುರುದೃಷ್ಟಿ ಸಭಾಭವನದಲ್ಲಿ ನಡೆಯಲಿದೆ. ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಗೋಳಗೋಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಳೆದ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಅವರಿಗೆ ನೀಡಲಾಗಿತ್ತು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಿ ಗೌರವಿಸಲಾಗಿತ್ತು.


ದಾಸಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ವಿದ್ವಾಂಸರಾಗಿರುವ ಡಾ.ಅರಳುಮಲ್ಲಿಗೆಯವರು, ವಿಷ್ಣುಸಹಸ್ರನಾಮವನ್ನು ವಿಶ್ವಾದ್ಯಂತ ಪಸರಿಸುವಲ್ಲೂ ಪ್ರಮುಖ ಪಾತ್ರ ವಹಿಸಿದವರು. ಭಾರತೀಯ ಸಂಸ್ಕøತಿಯ ಬಗ್ಗೆ ಆಳವಾದ ಜ್ಞಾನ ಹೊಂದಿರುವ ಅವರು ನಾಲ್ಕು ಸಾವಿರಕ್ಕೂ ಹೆಚ್ಚು ಪ್ರವಚನಗಳನ್ನು ನೀಡಿದ್ದಾರೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ 300ಕ್ಕೂ ಅಧಿಕ ಭಾಗವತ ಸಪ್ತಾಹಗಳನ್ನು ನಡೆಸಿಕೊಟ್ಟಿದ್ದಾರೆ.


ದೇಶ ವಿದೇಶಗಳಲ್ಲಿ ಪ್ರವಾಸ ಮಾಡಿ ದಾಸಸಾಹಿತ್ಯ, ರಾಮಾಯಣ, ಭಾಗವತ ಗೀತೆ, ವಿಷ್ಣು ಸಹಸ್ರನಾಮ, ಭಕ್ತಿ ಭಾಗವತ, ಸುಂದಕಕಾಂಡ, ಶಿವಪಂಚಾಕ್ಷರಿ ಮಂತ್ರ, ರುದ್ರ-ಚಮಕ ಬಗ್ಗೆ ಅಮೆರಿಕ, ಯೂರೋಪ್, ಓಷಿಯಾನಾ, ಆಗ್ನೇಯ ಏಷ್ಯಾ ಮತ್ತು ಗಲ್ಫ್ ದೇಶಗಳಲ್ಲಿ ಪ್ರಚನಗಳನ್ನು ನೀಡಿದ್ದಾರೆ. ಭಕ್ತಿ ಚಳವಳಿಯಲ್ಲಿ ಇವರ ಗಣನೀಯ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ ಎಂದು ಪ್ರಕಟಣೆ ಹೇಳಿದೆ.


ಸೆಪ್ಟೆಂಬರ್ 10ರಂದು ಬೆಳಿಗ್ಗೆ ವಿಷ್ಣುಸಹಸ್ರನಾಮ ಲೇಖನ ಯಜ್ಞದ ಅಂಗವಾಗಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣವನ್ನೂ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ 500ಕ್ಕೂ ಹೆಚ್ಚು ಮಂದಿ ಈ ಪಾರಾಯಣದಲ್ಲಿ ಪಾಲ್ಗೊಳ್ಳುವರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top