ಮಂಗಳೂರು: ಶ್ರೀನಿವಾಸ ಔಷಧೀಯ ಮಹಾವಿದ್ಯಾಲಯವು ಇಂಡಿಯನ್ ಫಾರ್ಮಾಸ್ಯುಟಿಕಲ್ ಅಸೋಸಿಯೇಶನ್, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಮಂಗಳೂರು, ಇವರ ಸಹಯೋಗದೊಂದಿಗೆ ವಿಶ್ವ ಔಷಧ ತಜ್ಞರ ದಿನ-2024ನ್ನು 25 ಸೆಪ್ಟೆಂಬರ್ ರಂದು ಶ್ರೀನಿವಾಸ ಔಷಧೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.
ಕೌಶಲ್ ಕೆ ಪಾಟಕ್, ಫೌಂಡರ್, ಡೈರೆಕ್ಟರ್, ಸರ್ಜಿಕ್ ಶೇರ್ ಪ್ರೈ.ಲಿಮಿಟೆಡ್, ಮಣಿಪಾಲ್ ಇವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರ ಜೀವನದ ಸ್ಪೂರ್ತಿದಾಯಕ ಕಥೆಯನ್ನು ಹಂಚಿಕೊಂಡರು ಮತ್ತು ಸಾಮಾನ್ಯ ವ್ಯಕ್ತಿ ಔಷಧೀಯ ತಂತ್ರಜ್ಞಾನದಲ್ಲಿ ಹೇಗೆ ಮಹತ್ವದ ಪ್ರಭಾವ ಬೀರಬಹುದು ಎಂಬುದನ್ನು ವಿವರಿಸಿದರು.
ಡಾ.ಎ.ಆರ್ ಶಬರಾಯ, ಪ್ರಾಂಶುಪಾಲರು ಹಾಗೂ ನಿರ್ದೇಶಕರು ಶ್ರೀನಿವಾಸ ಔಷಧೀಯ ಮಹಾವಿದ್ಯಾಲಯ, ಮತ್ತು ಅಧ್ಯಕ್ಷರು, ಇಂಡಿಯನ್ ಫಾರ್ಮಾಸ್ಯುಟಿಕಲ್ ಅಸೋಸಿಯೇಶನ್, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಮಂಗಳೂರು ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಜಾಗತಿಕ ಆರೋಗ್ಯದಲ್ಲಿ ಔಷಧಿಕಾರರ ಪ್ರಮುಖ ಪಾತ್ರ ಮತ್ತು ಸಾರ್ವಜನಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳಲ್ಲಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಡಾ.ಇ.ವಿ.ಎಸ್. ಸುಬ್ರಹ್ಮಣ್ಯಂ, ಪ್ರೊಪೆಸರ್, ಶ್ರೀನಿವಾಸ ಔಷಧೀಯ ಮಹಾವಿದ್ಯಾಲಯ, ಉಪಾಧ್ಯಕ್ಷರು, ಇಂಡಿಯನ್ ಫಾರ್ಮಾಸ್ಯುಟಿಕಲ್ ಅಸೋಸಿಯೇಶನ್, ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಮಂಗಳೂರು ಇವರು ವಿಶ್ವ ಔಷಧÀ ತಜ್ಞರ ದಿನದ ಮಹತ್ವವನ್ನು ತಿಳಿಸಿದರು. ಡಾ. ವೀರೇಶ್ ಕೆ ಚೆಂಡೂರ, ಪ್ರೊಫೆಸರ್, ಇವರು ಅತಿಥಿಗಳನ್ನು ಸ್ವಾಗತಿಸಿದರು.
ಕುಮಾರಿ ಜೋಸ್ನಾ ಪ್ರಿಯ ಮತ್ತು ಕುಮಾರಿ ನಿರೀಕ್ಷಾ ಕಾರ್ಯಕ್ರಮನ್ನು ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಪ್ರದೀಪ್ ಇವರು ವಂದನಾರ್ಪಣೆಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ