ಒಕ್ಕೂಟದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ: ಶಾಮಲ ಯಾದವ್

Upayuktha
0


ಬಳ್ಳಾರಿ: 
ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಜನಾಂಗಗಳ ಹಿಂದುಳಿದ ವರ್ಗ ಪ್ರವರ್ಗ 1 ಒಕ್ಕೂಟದ ನೂತನ ಕಚೇರಿಯ ಉದ್ಘಾಟನೆಯನ್ನು ಬೆಂಗಳೂರಿನಲ್ಲಿ ದಿನಾಂಕ ಸೆ 15 ರಂದು ನಡೆದಿದೆ. ಈ ಸಮಾರಂಭದಲ್ಲಿ ಗಣ್ಯ ವ್ಯಕ್ತಿಗಳು, ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೆ ರವೀಂದ್ರ ಶೆಟ್ಟಿ ಗೌರವಧ್ಯಕ್ಷರು, ಎಂ ಪ್ರಕಾಶ್ ರಾಜ್ಯಾಧ್ಯಕ್ಷರು, ರವಿಕುಮಾರ್ ಎಂಎಲ್ಸಿ ವಿಧಾನ ಪರಿಷತ್ ಸದಸ್ಯರು ಕರ್ನಾಟಕ, ಎಂ ಮುನೇಗೌಡರು ರಾಜ್ಯ ಕಾರ್ಯಾಧ್ಯಕ್ಷರು ಚಿಕ್ಕಬಳ್ಳಾಪುರ, ಎಂವಿ ರಾಜೇಶ್ವರಿ ಯಾದವ್ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರು ಇವರ ಉಪಸ್ಥಿತಿಯಲ್ಲಿ ಶ್ರೀಮತಿ ಕೆ ಶಾಮಲ ಯಾದವ್ ವಕೀಲರು ಬಳ್ಳಾರಿ ಇವರನ್ನು ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ನೇಮಕ ಮಾಡಿರುತ್ತಾರೆ. 


ಹುದ್ದೆಯನ್ನು ಸ್ವೀಕರಿಸಿ ಮಾತನಾಡಿದ ಶಾಮಲ ಯಾದವ್, ತಮ್ಮ ಮೇಲೆ ನಂಬಿಕೆಯನ್ನಿಟ್ಟು ಈ ಪದವಿ ನೀಡಲು ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಒಕ್ಕೂಟವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು  ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ  ಅವರಿಗೆ ಶೀಲ್ಡನ್ನು ನೀಡಿ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top