ನಿಟ್ಟೆ: ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್‌ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯನ್ನು ಪ್ರಕಟಿಸುತ್ತದೆ.
2024ನೇ ವರ್ಷದ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಸಂಶೋಧಕರಾದ ಡಾ.ಗಣೇಶ್ ಕುಮಾರ್ ಹಾಗೂ ಡಾ.ಸಂತೋಷ್ ಕೆ ತಿವಾರಿ ಅವರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ. ಡಾ.ಗಣೇಶ್ ಕುಮಾರ್ ಅವರು ಸತತ ಐದನೇ ಬಾರಿ ಹಾಗೂ ಡಾ. ಸಂತೋಷ್ ತಿವಾರಿ ಅವರು ಸತತ್ ಎರಡನೇ ಬಾರಿ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಇರ್ವರು ಸಿಂಗಲ್ ಆಥರ್, ಕೆರಿಯರ್ ಲಿಸ್ಟ್ ನಲ್ಲಿ ಸ್ಥಾನ ಪಡೆದಿರುವುದು ಅವರ ಸಾಧನೆಗೆ ಹೆಚ್ಚಿನ ಮೆರುಗು ತಂದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ