ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಾಲೇಜುಗಳಿಗೆ ಗುಣಮಟ್ಟದ ಆಧಾರದ ಮೇಲೆ ಸ್ವಾಯತ್ತ ಸ್ಥಾನಮಾನ ನೀಡುವ ಸ್ಥಾಯಿಸಮಿತಿಯ ಶಿಫಾರಸಿಗನುಗುಣವಾಗಿ ನವದೆಹಲಿಯ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯು.ಜಿ.ಸಿ), ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸ್ವಾಯತ್ತ ಸ್ಥಾನಮಾನವನ್ನು 2024-2025 ರಿಂದ 2033-2034ರ ವರೆಗೆ, ಅಂದರೆ ಮತ್ತೆ ಹತ್ತು ವರ್ಷದ ಅವಧಿ, ವಿಸ್ತರಿಸಲು ಅನುಮೋದನೆ ನೀಡಿದೆ.
ನಿಜಕ್ಕೂ ಇದು ಸಂತಸದ ಸಂಗತಿ. ಇದಕ್ಕೆ ಕಾರಣ-ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡು ಬಂದಿರುವುದು ಹಾಗೂ ನಿರಂತರ ಸಂಶೋಧನೆ ಹಾಗೂ ಪ್ರಾತ್ಯಕ್ಷಿಕೆಗಳಿಗೆ ನಾವು ನೀಡಿರುವ ಆದ್ಯತೆ. ಈ ಅಪರೂಪದ ಸ್ವಾಯತ್ತ ಸ್ಥಾನಮಾನ ಲಭಿಸಿರುವುದು ಇಡೀ ಕರ್ನಾಟಕದಲ್ಲಿ ಕೇವಲ 25 ಇಂಜಿನಿಯರಿಂಗ್ ಕಾಲೇಜುಗಳಿಗೆ ಮಾತ್ರ. 2007ನೇ ಇಸವಿಯಿಂದಲೇ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಸ್ವಾಯತ್ತ ಸ್ಥಾನಮಾನ ಪಡೆದಿದೆ. ಈಗ ಮತ್ತೆ ಹತ್ತು ವರ್ಷಗಳ ಅವಧಿಗೆ ಇದು ವಿಸ್ತರಿಸಲ್ಪಟ್ಟಿದೆ. ಅದಕ್ಕಾಗಿ ರಾಷ್ಟ್ರದ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ’, ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ಹೆಚ್.ಸಿ. ನಾಗರಾಜ್ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ