ಆದರ್ಶ ವಿದ್ಯಾಲಯ: ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

Chandrashekhara Kulamarva
0


ಬಳ್ಳಾರಿ:
ಬಳ್ಳಾರಿ ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಖಾಲಿ ಇರುವ ಅಡುಗೆ ತಯಾರಕ ಸಹಾಯಕ ಸಿಬ್ಬಂದಿ (1) ಹುದ್ದೆಗೆ ಪರಿಶಿಷ್ಟ ಜಾತಿ(ಎಸ್‌ಸಿ) ವರ್ಗದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅ.15 ರ ಸಂಜೆ 4.30ರೊಳಗಾಗಿ ಶಾಲೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು ಸತ್ಯನಾರಾಯಣ ತಿಳಿಸಿದ್ದಾರೆ.


ಬೇಕಾದ ದಾಖಲೆ: ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಹಾಗೂ ಇತರೆ ದಾಖಲೆಗಳೊಂದಿಗೆ ಜೆರಾಕ್ಸ್ ಪ್ರತಿಗಳೊಂದಿಗೆ ರಿಜಿಸ್ಟ್ರಾರ್  ಪೋಸ್ಟ್ ಮೂಲಕ ಶಾಲೆಗೆ ಬಂದು ಅರ್ಜಿ ಸಲ್ಲಿಸಬೇಕು.


ಷರತ್ತುಗಳು: ಅಭ್ಯರ್ಥಿ ವಯೋಮಿತಿ 30 ರಿಂದ 50 ವರ್ಷ ಇರಬೇಕು. ಶಾಲೆ ಇರುವ ಸ್ಥಳದ ಖಾಯಂ ನಿವಾಸಿಯಾಗಿದ್ದು, ಕನಿಷ್ಟ ಏಳನೇ ತರಗತಿ ಉತ್ತೀರ್ಣಗೊಂಡಿರಬೇಕು. ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಮಾಸಿಕ ಗೌರವ ಸಂಭಾವನೆ 3,600 ವೇತನವಿದ್ದು, ಖಾಯಂ ಹುದ್ದೆಯಾಗಿ ರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯ ಕಚೇರಿಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು ಸತ್ಯನಾರಾಯಣ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top