ಆಳ್ವಾಸ್ ಪದವಿಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

Chandrashekhara Kulamarva
0

ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮಗಳಲ್ಲಿ ಎಸ್.ಎಸ್.ಎಲ್.ಸಿ. ಓದುತ್ತಿರುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ




ಮೂಡುಬಿದಿರೆ:
ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು ಫೋಷಿಸಿದೆ.


10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಇ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ), ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ)ದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.


ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಪರಿಣಾಮಕಾರಿ ಪದವಿಪೂರ್ವ ಶಿಕ್ಷಣವನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನಿಂದ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಷಯಗಳಲ್ಲಿ ಪಡೆಯಬಹುದು.


ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು  ಅಕ್ಟೋಬರ್ 15, 2024ರಂದು ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆಪತ್ರಿಕೆ ಇರಲಿದ್ದು,  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್ 12, 2024 ಕೊನೆಯ ದಿನಾಂಕ ವಾಗಿರುತ್ತದೆ.


ವಿದ್ಯಾರ್ಥಿಗಳು ಈ ವೆಬ್ ಸೈಟ್   https://scholarship.alvas.org/puc/login.php  ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.


ವಿಶೇಷ ಸೂಚನೆ:

ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದಲ್ಲಿ ಮತ್ತು ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ  ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ  ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯಲಿವೆ.

  

ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 636633727/6366377827/6366377825 ಸಂಪರ್ಕಿಸಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top