ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2024 ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

Chandrashekhara Kulamarva
0


ಮೂಡುಬಿದಿರೆ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ತಂಡವು ಅಥ್ಲೆಟಿಕ್ಸ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 11 ಬೆಳ್ಳಿ, 07 ಕಂಚಿನ ಪದಕಗಳೊಂದಿಗೆ ಒಟ್ಟು 29 ಪದಕ ಪಡೆಯಿತು.  


ಕುಸ್ತಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 12 ಚಿನ್ನ, 07 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 21 ಪದಕ, ಯೋಗ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 05 ಪದಕ ಪಡೆಯಿತು.  ಕಬಡ್ಡಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಖೋ-ಖೋ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ದ್ವಿತೀಯ, ವೇಯ್ಟ್ ಲಿಫ್ಟಿಂಗ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 05 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 18 ಪದಕವನ್ನು ಪಡೆದುಕೊಂಡರು.


ಅಕ್ಟೋಬರ್ 03ರಿಂದ 06ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ (ಸಿಎಮ್ ಕಪ್ ಕ್ರೀಡಾಕೂಟ) ಆಳ್ವಾಸ್ ಕಾಲೇಜಿನ 70 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top