ಬಳ್ಳಾರಿ: ಬಳ್ಳಾರಿ ಜಿಲ್ಲೆ ಪಿಯು ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಮುನಿಸಿಪಲ್ ಕಾಲೇಜಿನಲ್ಲಿ ನಡೆದವು. ಈ ಸ್ಪರ್ಧೆಗಳಲ್ಲಿ ಬೆಸ್ಟ್ ಪಿಯು ಕಾಲೇಜಿನ ಶ್ರಾವಣಿ, ಜ್ಯೋತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಆಂಗ್ಲ ಚರ್ಚಾ ಸ್ಪರ್ಧೆಯಲ್ಲಿ ಸುಶ್ಮಿತಾ ದ್ವಿತೀಯ ಬಹುಮಾನ ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದರು. ಈ ವಿಜೇತರು ವಿಭಾಗ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ಇವರನ್ನು ಸಂಸ್ಥೆಯ ಅಧ್ಯಕ್ಷ ಕೊನಂಕಿ ರಾಮಪ್ಪ ಉಪಾಧ್ಯಕ್ಷ ಕೊನಂಕಿ ತಿಲಕ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸಲು, ಪ್ರಾಂಶುಪಾಲ ವೆಂಕಟೇಶ್ವರ ರಾವು, ಉಪ ಪ್ರಾಂಶುಪಾಲ ಶ್ರೀನಿವಾಸ ರೆಡ್ಡಿ ಜಿ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ