ಸಿದ್ದಕಟ್ಟೆ ಸರಕಾರಿ ಪ.ಪೂ ಕಾಲೇಜು ಎನ್ನೆಸ್ಸೆಸ್ ವಾರ್ಷಿಕ ಶಿಬಿರ

Upayuktha
0


ಸಿದ್ಧಕಟ್ಟೆ: ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು. ಸಮಾರಂಭವನ್ನು ಸ್ಥಳೀಯ ಗಣ್ಯರಾದ ಅರ್ಕ ಕೀರ್ತಿ ಇಂದ್ರ ಇವರು ಉದ್ಘಾಟಿಸಿ, "ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡಬೇಕು ಹಾಗೂ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮವಾದಂತಹ ವೇದಿಕೆ ಆಗಿದೆ" ಎಂದು ನುಡಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಇವರು ಶಿಬಿರಾರ್ಥಿಗಳಿಗೆ ವಿವಿಧ ನಿದರ್ಶನಗಳನ್ನು ನೀಡುತ್ತಾ, ವಿದ್ಯಾರ್ಥಿ ಜೀವನವು ಅಮೂಲ್ಯವಾದದ್ದು ಹಾಗೂ ಸಿಗುವಂತ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ತಮ್ಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕು"ಎಂದರು.


ಅಧ್ಯಕ್ಷತೆ ವಹಿಸಿದ ಸಹಕಾರಿ ವ್ಯವಸಾಯಿಕ ಸೇವಾ ಸಂಘ ನಿಯಮಿತ ಸಿದ್ಧಕಟ್ಟೆಯ ಅಧ್ಯಕ್ಷ ಪ್ರಭಾಕರ ಪ್ರಭು  "ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗಿದೆ" ಎಂದು ಹೇಳಿದರು.


ಸಮಾರಂಭದಲ್ಲಿ ಉಪಸ್ಥಿತರಿದ್ದ  ರೋಟರಿ ಕ್ಲಬ್ ಫಲ್ಗುಣಿ ಸಿದ್ದಕಟ್ಟೆ ಅಧ್ಯಕ್ಷ ಶಿವಯ್ಯ  ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಉಮೇಶ್ ಗೌಡ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ವೀರಪ್ಪಗೌಡ ಕೊಡಂಗೆ, ಪ್ರಾಂಶುಪಾಲ ಉದಯಕುಮಾರ್, ಹಿರಿಯ ಉಪನ್ಯಾಸಕ ಶ್ರೀನಿವಾಸ ನಾಯ್ಕ, ಉಪ ಪ್ರಾಂಶುಪಾಲೆ ಲೋನಾ ಲೋಬೋ, ಸಹ ಶಿಕ್ಷಕರಾದ ಉಮೇಶ್ ಕುಮಾರ್ ವಿ ಕರ್ಕೇರ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಶೀನಪ್ಪ ಎನ್ ಸ್ವಾಗತಿಸಿದರು, ಶಿಬಿರಾರ್ಥಿ ಲತೀಶ ದ್ವಿತೀಯ ಕಲಾ ವಿಭಾಗ ವಂದಿಸಿದರು ಹಾಗೂ ಕನ್ನಡ ಉಪನ್ಯಾಸಕ ಸಂಜಯ್ ಬಿ ಎಸ್ ಇವರು ಕಾರ್ಯಕ್ರಮ ನಿರ್ವಹಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top