ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಸದಸ್ಯತ್ವ ಅಭಿಯಾನದ ಬೂತ್ ಮಟ್ಟದ ಕಾರ್ಯಾಗಾರವನ್ನು, ಮಾಜಿ ಶಾಸಕರಾದ ಎಂ ಎಸ್ ಸೋಮಲಿಂಗಪ್ಪನವರ ನೇತೃತ್ವದಲ್ಲಿ ನಡೆಯಿತು . ಜಿಲ್ಲಾಧ್ಯಕ್ಷರಾದ ಅನಿಲ್ ನಾಯ್ಡು , ಸಿರುಗುಪ್ಪ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂಎಸ್ ಸಿದ್ದಪ್ಪನವರು, ಜಿಲ್ಲಾ ಉಪಾಧ್ಯಕ್ಷರಾದ ಗಾಳಿ ಶಂಕರಪ್ಪನವರು,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ, ಪಕೀರಪ್ಪ ಮತ್ತು ಲಸ್ಗರ್ ಶೇಖಪ್ಪ ಮತ್ತು ಬೂತ್ ಮಟ್ಟದ ಕಾರ್ಯಕರ್ತರು ಸದಸ್ಯರುಗಳು ಈ ಕಾರ್ಯಗಾರದಲ್ಲಿ ಭಾಗವಹಿಸಿ ನಂತರ ಬೂತ್ ಗಳಲ್ಲಿ ಸದಸ್ಯತ್ವ ಅಭಿಯಾನವನ್ನು ಮಾಡಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ