ಬಳ್ಳಾರಿ: ಶಿಕ್ಷಣವು ವ್ಯಕ್ತಿಗಳಿಗೆ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳನ್ನು ಸಬಲಗೊಳಿಸುತ್ತದೆ ಎಂದು ಲಕ್ಷ್ಮೀಕಾಂತ್ ಕೋಳುರು ವಲಯದ ಮೇಲ್ವಿಚಾರಕರು ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕೋಳೂರು ವಲಯ ಬೈಲೂರು ಕಾರ್ಯಕ್ಷೇತ್ರದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಗೆ ಮೂರು ತಿಂಗಳ ಕಾಲ ಟ್ಯೂಷನ್ ಕ್ಲಾಸ್ ತರಬೇತಿಗೆ ಚಾಲನೆ ನೀಡಲಾಯಿತು.
ಮಲ್ಲಿಕಾರ್ಜುನ:- ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು ಮಾತನಾಡಿ, ಶಿಕ್ಷಣವು ಮಕ್ಕಳ ಅಭಿವೃದ್ಧಿ ಮತ್ತು ಸಮಾಜದ ಪ್ರಗತಿಯ ಮೂಲಾಧಾರವಾಗಿದೆ. ಇದು ವ್ಯಕ್ತಿಗಳನ್ನು ಸಶಕ್ತಗೊಳಿಸುವ, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸುವ ಮತ್ತು ಸಕಾರಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಪ್ರಬಲ ಸಾಧನವಾಗಿದೆ ಧರ್ಮಸ್ಥಳದ ಧರ್ಮಾಧಿಕಾರಿಗಳು ರಾಜ್ಯಾದ್ಯಂತ ಇಂತಹ ಸರಕಾರಿ ಶಾಲೆಯ ಬಡ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮತಿ ಆಶಾ ಜ್ಞಾನ ವಿಕಾಸ ಸಮನ್ವಯ ಅಧಿಕಾರಿಗಳು ಶಾಲೆಯ ಎಲ್ಲಾ ಸಹ ಶಿಕ್ಷಕರು. ಶ್ರೀ ಮಯೂರ್ ಟ್ಯೂಶನ್ ತರಬೇತಿ ನೀಡುವ ಶಿಕ್ಷಕರು. ಶ್ರೀ ಬಸವರಾಜ್ VLE ಅವರು ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಕುಮಾರಿ ವೀರಮಲ್ಲಮ್ಮ ಮತ್ತು ಶಾಲೆಯ ಸಹ ವಿಧ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ