ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್: ಎಸ್.ಪಿ ತಂಡ ಪ್ರಥಮ, ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ

Upayuktha
0


ಮಂಗಳೂರು: ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ, ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ.


ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್ ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ ಹಾಗೂಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ ತಂಡದ ಶಿವಕುಮಾರ್ ಪ್ರಶಸ್ತಿ ಪಡೆದರು. 

 ‌

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ  ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನ ದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ತಂಡ ಪ್ರಥಮ ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ.


ಮುಖ್ಯ ಅತಿಥಿಯಾಗಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡಿ, ಮಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಬ್ರ್ಯಾಂಡ್ ಮಂಗಳೂರು  ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.


ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಬಹುಮಾನಿತರ ವಿವರ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top