ಮಡಿಕೇರಿ: ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುತ್ತಿರುವ 17 ವರ್ಷದೊಳಗಿನ ಬಾಲಕಿಯರ ಸಿಬಿಎಸ್‌ಇ ರಾಷ್ಟ್ರೀಯ ಹಾಕಿ ಪಂದ್ಯಾಟದಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕಿಯರ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.
ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡಿನ ಸಚ್ಚಿದಾನಂದ ಜ್ಯೋತಿ ನಿಕೇತನ್ ಶಾಲಾ ತಂಡವನ್ನು 2-0 ಗೋಲುಗಳಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದ್ದ ಕೊಡಗು ವಿದ್ಯಾಲಯ ತಂಡವು ಇಂದು ನಡೆದ ಫೈನಲ್ ಪಂದ್ಯಾಟದಲ್ಲಿ ತಂಡದ ಪ್ರಮುಖ ಮುನ್ನಡೆ ಆಟಗಾರರ ಅನುಪಸ್ಥಿತಿಯೊಂದಿಗೆ ಆಟವಾಡಿ ಹರಿಯಾಣದ ಲಿಟ್ಲ್ ಏಂಜಲ್ ಸ್ಕೂಲ್ ಸೋನಿಪಥ್ ತಂಡದ ವಿರುದ್ಧ 0-5 ಗೋಲುಗಳಿಂದ ಪರಾಭವಗೊಂಡು ಬೆಳ್ಳಿ ಪದಕದೊಂದಿಗೆ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಡಬೇಕಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ