ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.
ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಲಿದ್ದು ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿರುವುದು ವಿಶೇಷ.
ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ