ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರ

Upayuktha
0

 ಮೈತ್ರಿ ಸೇವಾ ಸಂಸ್ಥೆ , ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ   ಜಾಗೃತಿ ಶಿಬಿರ


ಬಳ್ಳಾರಿ:
ಮೈತ್ರಿ ಸೇವಾ ಸಂಸ್ಥೆ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಶಿಬಿರವನ್ನು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು . ಸದರಿ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಬಳ್ಳಾರಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಬಸವರಾಜ ಇವರು ಉದ್ಘಾಟಿಸಿದರು.


ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ದಿನ ಮಾನ್ಯಗಳಲ್ಲಿ ಆರೋಗ್ಯ ತುಂಬಾ ಮುಖ್ಯವಾಗಿರುವುದರಿಂದ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಗ್ರಾಮೀಣ ಮಟ್ಟದ ಮಹಿಳೆಯರು ಆರೋಗ್ಯದ ಕಡೆ ಕಂಡುಬರುತ್ತದೆ ಹಾಗಾಗಿ ಮುಂದಿನ ದಿನಗಳಲ್ಲಿ ಆರೋಗ್ಯವೇ ಮಹಾಭಾಗ್ಯ ಎಂಬ ನಾಣ್ಣುಡಿಯಂತೆ ಆರೋಗ್ಯ ಚೆನ್ನಾಗಿದ್ದರೆ ನಾವು ಏನನ್ನಾದರೂ ಸಾಧಿಸಬಹುದು 


ಹಾಗಾಗಿ ಇಂತಹ ಕಾರ್ಯಕ್ರಮಗಳು ಸರ್ಕಾರದೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು ಗ್ರಾಮೀಣ ಮಟ್ಟದಲ್ಲಿ ಹೆಚ್ಚು ಕಾರ್ಯಕ್ರಮಗಳ ಆಗಬೇಕು ಎಂದು ತಿಳಿಸುವುದರೊಂದಿಗೆ ಬಳ್ಳಾರಿ ತಾಲೂಕಲ್ಲಿ ಮೈತ್ರಿ ಸೇವಾ ಸಂಸ್ಥೆಯವರು ಇಂಥ ಕಾರ್ಯಕ್ರಮಗಳನ್ನು ಮಾಡಲು ಮುಂದೆ ಬಂದಿರುವುದರಿಂದ ಅವರಿಗೆ ತುಂಬಾ ಹೃದಯದ ಧನ್ಯವಾದಗಳು ತಿಳಿಸುತ್ತೇನೆ ಇಂಥ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮಹಿಳೆಯರಿಗೆ ಕರೆ ನೀಡಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ವ್ಯವಸ್ಥಾಪಕರಾದ ಶ್ರೀಮತಿ ವಿಜಯಲಕ್ಷ್ಮಿ ಇವರು ಗರ್ಭಕಂಠದ ಕ್ಯಾನ್ಸರ್ ಕುರಿತು ಈ ರೋಗ ಹೇಗೆ ಬರುತ್ತದೆ ಹೇಗೆ ತಡೆ ಹಿಡಿಯಬೇಕು ಮುಂದಿನ ದಿನಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ತುಂಬಾ ವಿವರವಾಗಿ ಮಹಿಳೆಯರಿಗೆ ತಿಳಿಸಿಕೊಟ್ಟರು. ಸದರಿ ಕಾರ್ಯಕ್ರಮದಲ್ಲಿ  ವಿನೋದ್ ಕುಮಾರ್ ಸಂಯೋಜಕರು ಜಿಲ್ಲಾ ಕೈಗಾರಿಕೆ ಕೇಂದ್ರ ಬಳ್ಳಾರಿ ನಲ್ಮ್ ಜಿಲ್ಲಾ ಪಂಚಾಯತಿ ಬಳ್ಳಾರಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top