ಹುನಗುಂದ: ನಗರದ ವಿಜಯ ಮಹಾಂತೇಶ ಕಾಲೇಜಿನ ಸಾನಿಯಾ ಲಿಂಗಸ್ಗೂರ ಪದವಿ ಪೂರ್ವ ಕಾಲೇಜು ಜಿಲ್ಲಾ ಮಟ್ಟದ ಕ್ರೀಡಾಕೂಟದ ಚದುರಂಗ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ಅದರಂತೆ ಆನಂದಗೌಡ ಗೌಡರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ 97 ಕೆಜಿ ತೂಕದ ಪುರುಷರ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾನೆ. ಇಬ್ಬರನ್ನು ಪ್ರಾಚಾರ್ಯರು, ಕ್ರೀಡಾ ನಿರ್ದೇಶಕ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.