ಪರಿಷತ್ ಚುನಾವಣೆ: ಸ್ಥಳೀಯ ಜನಪ್ರತಿನಿಧಿಗಳ ಸಭೆಯಲ್ಲಿ ಶಾಸಕ ಕಾಮತ್ ಭಾಗಿ

Upayuktha
0


ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಾಳೆಪುಣಿ ಪಂಚಾಯತ್, ತುಂಬೆ ಪಂಚಾಯತ್, ಕೊಡ್ಮಣ್ ಪಂಚಾಯತ್, ಪುದು ಪಂಚಾಯತ್, ಅಂಬ್ಲಮೊಗರು ಪಂಚಾಯತ್, ಕುರ್ನಾಡು ಪಂಚಾಯತ್, ಪಜೀರು ಪಂಚಾಯತ್, ಕೋಟೆಕಾರು ಪಟ್ಟಣ ಪಂಚಾಯತ್, ಸೋಮೇಶ್ವರ ಪುರಸಭೆ, ಹಾಗೂ ಉಳ್ಳಾಲ ನಗರಸಭೆ ಸದಸ್ಯರ ಮತ್ತು ಪ್ರಮುಖರ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು.


ಇದೇ 21ರ ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರಿಗೆ ಅಮೂಲ್ಯವಾದ ಮತಗಳನ್ನು ನೀಡುವ ಮೂಲಕ ತಮ್ಮೆಲ್ಲರ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ಗ್ರಾಮ ಸ್ವರಾಜ್ಯದ ಕುರಿತಾಗಿ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಯೋಜನೆಗಳೇ ನಮಗೆ ಶ್ರೀರಕ್ಷೆ ಎಂದು ಶಾಸಕರು ಹೇಳಿದರು. 


ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ಸಹಿತ ಅನೇಕರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top