ಪುತ್ತೂರು: ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಅಧ್ಯಾಪಕರೂ ಆಗಿರುವ ವಿ.ಬಿ ಆರ್ತಿಕಜೆ ಅವರು ಕಳೆದ ಹಲವಾರು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಸೇವೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ವಾಸವಾಗಿರುವ ಇವರಿಗೆ ಪ್ರಸ್ತುತ 81 ವರ್ಷ, ಸುಮಾರು 35 ವರ್ಷಗಳ ಕಾಲ ಉಪನ್ಯಾಸಕ ವೃತ್ತಿಯನ್ನು ಜೊತೆಗೆ 39 ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸಿದವರು. ಸಾಹಿತ್ಯ ಲೋಕದಲ್ಲಿ ಸುಮಾರು 50 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ಈವರೆಗೆ 50 ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.
ಸುದ್ದಿ ಪತ್ರಿಕೆಯಲ್ಲಿ 5600 ಚಿಂತನಗಾಥಾ ಅಂಕಣ, 1500 ಕಥಾ ರಶ್ಮಿ ಅಂಕಣ, 1050 ನಗೆ ಮಿಂಚು ಅಂಕಣ ಪ್ರಕಟವಾಗಿರುತ್ತದೆ. ಮಾತ್ರವಲ್ಲದೆ ರಾಜ್ಯದ ಪ್ರತಿಷ್ಠಿತ ಪತ್ರಿಕೆಗಳಲ್ಲಿ ನೂರಕ್ಕೂ ಅಧಿಕ ಲೇಖನ ಪ್ರಕಟವಾಗಿದೆ. ನೂರಾರು ಯುವ ಸಾಹಿತಿಗಳಿಗೆ ಸಾಹಿತ್ಯ ಲೋಕಕ್ಕೆ ಬರಮಾಡಿಕೊಳ್ಳುವಲ್ಲಿ ಇವರ ಪ್ರೋತ್ಸಾಹ ಅತ್ಯಮೂಲ್ಯವಾಗಿದೆ.
ಪುತ್ತೂರು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತು ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿವೆ. ಇವರ ಈ ಎಲ್ಲ ಸೇವೆಗಳನ್ನು ಪರಿಗಣಿಸಿ ಮಾನ್ಯ ಶಾಸಕರ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ