ಮಂಗಳೂರು: ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಸೇರಿ ಈ ಭಾಗದಿಂದ ಹೈಕೋರ್ಟ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಜ್ಯಗಳು ಸಲ್ಲಿಕೆಯಾಗುತ್ತಿದೆ. ಆದರೆ ಈ ಜಿಲ್ಲೆಗಳ ಜನರಿಗೆ ನ್ಯಾಯಕ್ಕಾಗಿ ದೂರದ ಬೆಂಗಳೂರಿನಲ್ಲಿರುವ ಹೈಕೋರ್ಟ್‌ಗೆ ಮೊರೆ ಹೋಗುವುದು ನಾನಾ ರೀತಿ ಅನಾನುಕೂಲ ಉಂಟುಮಾಡುವ ಜತೆಗೆ ಆರ್ಥಿಕವಾಗಿಯೂ ಹೆಚ್ಚು ಹೊರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮಂಗಳೂರನ್ನು ಕೇಂದ್ರೀಕರಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿದೆ. ಅದನ್ನು ಆದಷ್ಟು ಬೇಗ ಆದ್ಯತೆ ಮೇರೆಗೆ ಕಾರ್ಯರೂಪಕ್ಕೆ ತರಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ಹೀಗಾಗಿ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಾನು ನಮ್ಮ ಕೇಂದ್ರ ಕಾನೂನು ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತು ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಲ್ಲಿ ಈ ಭಾಗದ ಜನರ ಪರವಾಗಿ ಮನವಿ ಮಾಡುತ್ತಿದ್ದೇನೆ ಎಂದು ಸಂಸದರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


