ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋವಿಂದ ಭಟ್ ಪುಷ್ಪಾರ್ಚನೆಗೈದು ಮಾತನಾಡಿದರು. ವಿದ್ಯಾರ್ಥಿಗಳು, ಉಜ್ವಲ ಭವಿಷ್ಯಕ್ಕಾಗಿ ಸದ್ಗುಣಗಳನ್ನು ಬೆಳೆಸುವ ಗುರಿಯನ್ನು ಹೊಂದಬೇಕು. ಇದಕ್ಕೆ ಗಾಂಧಿಯವರ ಜೀವನಾದರ್ಶ ಪ್ರೇರಣೆಯಾಗಬೇಕು ಎಂದರು. ಇದೇ ಸಂದರ್ಭ ಸ್ವತಂತ್ರ ಭಾರತದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನೂ ಆಚರಿಸಲಾಯಿತು. ಅಧ್ಯಾಪಕ ವೃಂದ ಹಾಗೂವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ