ಹಲ್ಲೆಗೀಡಾದ ಬಜರಂಗದಳ ಮುಖಂಡನ ಭೇಟಿ ಮಾಡಿದ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ

Upayuktha
0


ಮಂಗಳೂರು: ಪೊಲೀಸ್ ಠಾಣೆಯಲ್ಲಿಯೇ ಮತಾಂಧರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಜರಂಗದಳ ಮುಖಂಡ ಅವರನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಭೇಟಿ ಮಾಡಿ ಧೈರ್ಯ ತುಂಬಿದರು. 


ಈ ಕುರಿತು ಮಾತನಾಡಿದ ಅವರು, ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಠಾಣೆಯಲ್ಲಿಯೇ ಹಲ್ಲೆಯಾಗುವುದೆಂದರೆ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಬೊಟ್ಟು ಮಾಡುತ್ತಿದೆ. ಕರಾವಳಿ ಪ್ರದೇಶದಲ್ಲಿ ಗಲಭೆ ನಡೆಸಲು ಸರಕಾರವೇ ಕುಮ್ಮಕ್ಕು ನೀಡುತ್ತಿದೆ. 


ಆರಕ್ಷಕರನ್ನು ನಿಯಂತ್ರಿಸಿ ಇಡುವ ಸರಕಾರದ ಪ್ರಯತ್ನ ಜಿಲ್ಲೆಯಲ್ಲಿ ಮತ್ತಷ್ಟು ಗಲಭೆ ನಡೆಯಲು ಸಂಚು ರೂಪಿಸಿದಂತಿದೆ. ಚುನಾವಣೆಯ ಹೊಸ್ತಿಲಲ್ಲಿ ಕೋಮು ಗಲಭೆ ಎಬ್ಬಿಸಿ ಅದರ ಉಪಯೋಗ ಪಡೆಯಲು ಕಾಂಗ್ರೆಸ್ ಹವಣಿಸುತ್ತಿರುವುದು ಇದರಿಂದ ಬಯಲಾಗಿದೆ. ಹಲ್ಲೆಕೋರರನ್ನು ಹೆಡೆಮುರಿ ಕಟ್ಟಿ ಕಾನೂನು ಕ್ರಮ ಜರುಗಿಸದೆ ಹೋದರೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. 


ಈ ಸಂದರ್ಭದಲ್ಲಿ ಯುವಮೋರ್ಚಾ ಮಂಗಳೂರು ಮಂಡಲ‌ ಅಧ್ಯಕ್ಷ ಮುರಳಿ ಕೊಣಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top