ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟವು ಅಕ್ಟೋಬರ್ 18 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಆ ದಿನ ಬೆಳಗ್ಗೆ 9.30 ಕ್ಕೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಬೆಳ್ತಂಗಡಿಯಲ್ಲಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಆಗಿರುವ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿ ಮುರಳೀಧರ್.ಎಸ್.ನಾಯ್ಕ್ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಮ್ಯಾಟ್ ಅಂಕಣದಲ್ಲಿ ನಡೆಯುವ ಈ ಪಂದ್ಯಾಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 15 ತಂಡಗಳು ಭಾಗವಹಿಸುತ್ತವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ