ಕಾರಂತರ ಕೃತಿಗಳ ಪುನರ್ ಅವಲೋಕನದ ಅಗತ್ಯವಿದೆ: ಪ್ರೊ. ಪಿ. ಕೃಷ್ಣಮೂರ್ತಿ

Upayuktha
0


ಸುರತ್ಕಲ್‌:
ಸೃಜನಶೀಲಾತ್ಮಕ ಶಿಕ್ಷಣ ಕ್ರಮಕ್ಕೆ ಪ್ರಾಶಸ್ತ್ಯ ನೀಡಿದ್ದ ಶಿವರಾಮ ಕಾರಂತರು ತಮ್ಮ ಬರವಣಿಗೆಗಳಿಂದ ಸ್ಪೂರ್ತಿ ನೀಡಿದವರು. ಪ್ರಸ್ತುತ ಕಾಲಘಟ್ಟದಲ್ಲಿ ಕಾರಂತರ ಕೃತಿಗಳ ಪುನರ್ ಅವಲೋಕನದ ಅಗತ್ಯವಿದೆ ಎಂದು ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ನುಡಿದರು.

ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ, ಭಾಷಾ ವಿಭಾಗ ಮತ್ತು ಸಾಹಿತ್ಯ ಸಂಘಗಳ ಸಹಯೋಗದಲ್ಲಿ ನಡೆದ ಡಾ. ಕೆ. ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 


ಕನ್ನಡ ವಿಭಾಗ ಮುಖ್ಯಸ್ಥ ಡಾ. ಸಂತೋಷ ಆಳ್ವ ಮತ್ತು ಉಪನ್ಯಾಸಕ ಕಿಟ್ಟು ಕೆ. ಕಾರಂತರ ಚೋಮನ ದುಡಿ ಮತ್ತು ಸರಸಮ್ಮನ ಸಮಾಧಿ ಕೃತಿಗಳ ವಿಮರ್ಶೆ ನಡೆಸಿದರು. ಕಾರಂತರ ಕುರಿತ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ಕಾಲೇಜಿನ ಗ್ರಂಥಾಲಯದಲ್ಲಿ ಡಾ. ಶಿವರಾಮ ಕಾರಂತರ ಸಮಗ್ರ ಕೃತಿಗಳ ಪ್ರದರ್ಶನ ನಡೆಯಿತು. ಉಪ ಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ. ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಉಪನ್ಯಾಸಕಿ ಅಕ್ಷತಾ ವಿ. ಮತ್ತಿತ್ತರರು ಉಪಸ್ಥಿತರಿದ್ದರು. ಡಾ. ಸಂತೋಷ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top