ಕಾಸರಗೋಡು ಕನ್ನಡ ಭವನದ ರೂವಾರಿಗಳಿಗೆ ಸನ್ಮಾನ

Upayuktha
0

ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ




ಕಾಸರಗೋಡು: ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ "ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ ಮಾನಸ ಮೈಸೂರು ಪ್ರಶಸ್ತಿ ಪ್ರದಾನ ಮಾಡಿದರು. ಸ್ಪಂದನ ಸಿರಿ ರಾಜ್ಯಾಧ್ಯಕ್ಷೆ ಶ್ರೀಮತಿ ಕಲಾವತಿ ಮಧುಸೂದನ್ ಪ್ರಶಸ್ತಿ ಫಲಕ ನೀಡಿದರು.


ಕೇರಳ ರಾಜ್ಯ ಕ.ಸಾ.ಪ ಅಧ್ಯಕ್ಷ ಡಾ ಜಯಪ್ರಕಾಶ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಸದಸ್ಯ ಎ. ಆರ್. ಸುಬ್ಬಯ್ಯಕಟ್ಟೆ, ಸಮ್ಮೇಳನ ಅಧ್ಯಕ್ಷರಾಧ ಸಾಹಿತಿ ವಿ.ಬಿ. ಕುಳಮರ್ವ, ಪ್ರೊ. ಎ ಶ್ರೀನಾಥ್ ಮುಂತಾದವರು ವೇದಿಕೆಯಲ್ಲಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top