ಪ್ರವಾಹ ಪೀಡಿತ ಗುಜರಾತ್, ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ 675 ಕೋಟಿ ರೂ ನೆರವು

Upayuktha
0


ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎನ್‌ಡಿಆರ್‌ಎಫ್) ಮುಂಗಡವಾಗಿ ಗುಜರಾತ್, ಮಣಿಪುರ ಮತ್ತು ತ್ರಿಪುರಾ ರಾಜ್ಯಗಳಿಗೆ ಪ್ರವಾಹ ಪೀಡಿತ ರಾಜ್ಯಗಳಿಗೆ 675 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಅನುಮೋದನೆ ನೀಡಿದೆ. ಒಟ್ಟು ಮೊತ್ತದಲ್ಲಿ ಗುಜರಾತ್‌ಗೆ 600 ಕೋಟಿ ರೂಪಾಯಿ, ಮಣಿಪುರಕ್ಕೆ 50 ಕೋಟಿ ರೂಪಾಯಿ ಮತ್ತು ತ್ರಿಪುರಾಕ್ಕೆ 25 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.


ಈ ವರ್ಷ ನೈಋತ್ಯ ಮಾನ್ಸೂನ್ ಸಮಯದಲ್ಲಿ ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಈ ರಾಜ್ಯಗಳು ಬಾಧಿತವಾಗಿವೆ. ಪ್ರವಾಹ ಪೀಡಿತ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.


ಈ ವರ್ಷದಲ್ಲಿ ಅಸ್ಸಾಂ, ಮಿಜೋರಾಂ, ಕೇರಳ, ತ್ರಿಪುರಾ, ನಾಗಾಲ್ಯಾಂಡ್, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಣಿಪುರದಲ್ಲಿ ಅತಿ ಹೆಚ್ಚು ಮಳೆ, ಪ್ರವಾಹ ಮತ್ತು ಭೂಕುಸಿತದಿಂದಾಗಿ ಹಾನಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಹಾನಿಯ ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಈ ಎಲ್ಲಾ ರಾಜ್ಯಗಳಲ್ಲಿ ಅಂತರ-ಸಚಿವಾಲಯದ ಕೇಂದ್ರ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅದು ಹೇಳಿದೆ.


ಉಳಿದ ರಾಜ್ಯಗಳಿಗೆ ಹೆಚ್ಚುವರಿ ಹಣಕಾಸು ನೆರವು ನೀಡುವುದನ್ನು ಅಂತರ ಸಚಿವಾಲಯದ ಕೇಂದ್ರ ತಂಡಗಳ ವರದಿಯ ನಂತರ ನಿರ್ಧರಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದ ಪ್ರವಾಹ ಪೀಡಿತ ರಾಜ್ಯಗಳಿಗೆ ಹಾನಿಯ ಸ್ಥಳದಲ್ಲೇ ಮೌಲ್ಯಮಾಪನ ಮಾಡಲು ಅಂತರ ಸಚಿವಾಲಯದ ಕೇಂದ್ರ ತಂಡಗಳನ್ನು ಶೀಘ್ರದಲ್ಲೇ ಕಳುಹಿಸಲಾಗುವುದು ಎಂದು ಗೃಹ ಸಚಿವಾಲಯ ಹೇಳಿದೆ.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top