ಮಂಗಳೂರು: ಇಂಡಿಯನ್ ಕಸ್ಟಮ್ಸ್ ಮಂಗಳೂರು ಕಮಿಷನರೇಟ್ ವತಿಯಿಂದ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ ಅ.29ರಂದು ಮಂಗಳವಾರ ಮಧ್ಯಾಹ್ನ 2 ರಿಂದ 6ರ ವರೆಗೆ ನಂತೂರಿನ ಪದುವಾ ಪ್ರೌಢಶಾಲೆ ಹತ್ತಿರದ ಸಿಒಡಿಪಿಯಲ್ಲಿ ನಡೆಯಲಿದೆ.
ಜ್ಯುವೆಲ್ಸ್ ಗ್ರೂಪ್, ಇಂಡಿಯಾನಾ ಕ್ಯಾನ್ಸರ್ ಸೆಂಟರ್ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಹಭಾಗಿತ್ವದಲ್ಲಿ ಈ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಸ್ತ್ರೀಯರ ಆರೋಗ್ಯ ತಪಾಸಣೆ, ಕ್ಯಾನ್ಸರ್ ತಪಾಸಣೆ (ಸ್ತ್ರೀಯರು ಹಾಗೂ ಪುರುಷರಿಗೆ ಪ್ರತ್ಯೇಕ ತಪಾಸಣೆ) ಹಾಗೂ ನುರಿತ ತಜ್ಞರಿಂದ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪೌರ ಕಾರ್ಮಿಕರು ಮತ್ತು ಅವರ ಕುಟುಂಬದವರು ಆದಷ್ಟು ಬೇಗನೆ ತಮ್ಮ ಹೆಸರು ನೋಂದಾಯಿಸಿಕೊಂಡು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ