ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಗಾಂಧಿ, ಶಾಸ್ತ್ರೀಜಿ ಜನ್ಮ ದಿನಾಚರಣೆ

Upayuktha
0


ಸುರತ್ಕಲ್‌: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಗಾಂಧೀಜಿ ಯವರ 155 ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ 120 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕರಾದ ಸುಧಾಕರ ರಾವ್ ಪೇಜಾವರ್ ಮಾರ್ಗದರ್ಶನ ನೀಡಿದರು.


ಈ ಕಾರ್ಯಕ್ರಮದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳು ಗಾಂಧೀ ತತ್ವವನ್ನು ಸಾರುತ್ತಾ ಸುರತ್ಕಲ್ ವರೆಗೆ ಜಾಥಾ ಮೆರೆವಣಿಗೆಯಲ್ಲಿ ಸಾಗಿದರು.


ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ.ಕೆ ಮತ್ತು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಸುಜಯರವರು ಉಪಸ್ಥಿತರಿದ್ದರು. ಗಾಂಧೀಜಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಮುಖ್ಯೋಪಾಧ್ಯಾಯರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ, ಶಾಲಾ ನಾಯಕ ಮತ್ತು ಉಪನಾಯಕಿ ಯವರು ಪುಷ್ಪನಮನ ಸಲ್ಲಿಸಿದರು. ಗಾಂಧಿಜೀಯ ಅಹಿಂಸೆಯನ್ನು ಪಾಲಿಸುವ ಬಗ್ಗೆ ಮತ್ತು ತಂಬಾಕು ಮತ್ತು ಮಾದಕ ವಸ್ತುಗಳಿಂದ ದೂರವಿರುವ ಕುರಿತಾದ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು.


ಶಾಲಾ ಮುಖ್ಯೋಪಾಧ್ಯಾಯರು ಗಾಂಧೀಜಿ ಮತ್ತು ಶಾಸ್ತ್ರಿಯವರ ಜನ್ಮ ದಿನಾಚರಣೆಗೆ ಶುಭ ಹಾರೈಸುವುದರೊಂದಿಗೆ ಅವರ ತತ್ವ ಮತ್ತು ಆದರ್ಶಗಳ ಪರಿಪಾಲನೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುರಿತಾಗಿ ಭಾಷಣಗೈದರು. ಹಾಡಿನ ಮೂಲಕ ಗುಣಗಾನ ಮಾಡಿದರು. ವಿದ್ಯಾರ್ಥಿಗಳು ಶ್ರಮದಾನ ಮಾಡಿದ ನಂತರ ಸಿಹಿತಿಂಡಿಯನ್ನು ವಿತರಿಸಲಾಯಿತು.


ದಿವಸ್ಪತಿಯವರು ಕಾರ್ಯಕ್ರಮ ನಿರೂಪಿಸಿದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top