ಅ.25: ಗೋವಾ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ

Upayuktha
0


ಪಣಜಿ (ಬಿಚೋಲಿ): 2024ರ ಅಕ್ಟೋಬರ್ 27 ಭಾನುವಾರದಂದು ಗೋವಾದ ಬಿಬೋಲಿಯ ಹೀರಾಬಾಯಿ ಸಭಾಂಗಣದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಅಧ್ಯಕ್ಷ ಹನುಮಂತಪ್ಪ ಶಿರೂರ್ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿ ಮತ್ತು ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 15ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ.


ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬೆಳಗಾವಿಯ ನ್ಯಾಯವಾದಿ ಧನ್ಯ ಕುಮಾರ್ ಪಾಟೀಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.


ಕಳೆದ 14 ವರ್ಷಗಳಿಂದಲೂ ಗೋವಾದಲ್ಲಿ ನಿರಂತರವಾಗಿ ಅಲ್ಲಿಯ ಸಂಘ-ಸಂಸ್ಥೆಗಳ ಸಹಕಾರ ದೊಂದಿಗೆ ಸಮ್ಮೇಳನಗಳನ್ನು ಆಚರಣೆ ಮಾಡಲಾಗುತ್ತಿದೆ. ಅದರ ಜೊತೆಗೆ ಗೋವಾದಲ್ಲಿನ ಕನ್ನಡಿಗರನ್ನ ಒಗ್ಗೂಡಿಸಿ ಕನ್ನಡಮಯ ವಾತಾವರಣವನ್ನು ನಿರ್ಮಿಸುವಲ್ಲಿ ಈ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ  ಪಾತ್ರ ಪ್ರಮುಖವಾದದ್ದು. ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಬಗ್ಗೆ ಪ್ರತಿಯೊಂದು ಸಮ್ಮೇಳನಗಳಲ್ಲಿ ಪ್ರಸ್ತಾಪಿಸಿ ಗೋವಾ ಕನ್ನಡಿಗರನ್ನು ಜಾಗೃತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ನಡೆಯುವ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಮಹತ್ವ ಪಡೆದುಕೊಂಡಿದೆ.


ಕರ್ಮಭೂಮಿ ಕನ್ನಡ ಸಂಘದ ನೇತೃತ್ವದಲ್ಲಿ ಈ ಸಮ್ಮೇಳನ ನಡೆಯಲಿದೆ. ಅಕ್ಟೋಬರ್ 27ರಂದು ಬಿಚೋಲಿಯಲ್ಲಿ ನಡೆಯಲಿರುವ ಗೋವಾದ 15ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನು ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ಉದ್ಘಾಟಿಸಲಿದ್ದಾರೆ. 501 ಮಹಿಳೆಯರು ಪೂರ್ಣ ಕುಂಭದೊಂದಿಗೆ ವೀರಗಾಸೆ, ಡೊಳ್ಳು, ತಮಟೆ, ಕೋಲಾಟ ತಂಡಗಳೊಂದಿಗೆ ಭವ್ಯವಾದ ಮೆರವಣಿಗೆ ಆಯೋಜಿಸಲಾಗಿದೆ. ವೇದಿಕೆಯಲ್ಲಿ ಕರ್ನಾಟಕ ರಾಜ್ಯದ ಅಭಿವೃದ್ಧಿ ಜಿಲ್ಲೆಗಳ ಸುಮಾರು 25ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಲಿವೆ. ಅಲ್ಲದೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕರುನಾಡ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಈ ಬೃಹತ್ ಸಮಾರಂಭಕ್ಕೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top