ಪಟ್ಲ ಫೌಂಡೇಶನ್ ವತಿಯಿಂದ ಗೋವಾ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣಕ್ಕೆ ಯೋಜನೆ
ಪಣಜಿ: ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕಲೆ ಬೆಳೆದ ರೀತಿ, ಗೋವಾದಲ್ಲಿ ನೀವೆಲ್ಲರೂ ಸೇರಿ ಕಲೆ ಬೆಳೆಸಿದ ವಿಷಯ ತಿಳಿದು ನನಗೆ ಹೆಮ್ಮೆ ಅನಿಸುತ್ತದೆ. ಯಕ್ಷಗಾನ ಆರಾಧನಾ ಕಲೆ, ಸಂಸ್ಕೃತಿ, ಸಂದೇಶ ಸಾರುವ ಕಲೆ ಎಂದು ಪಟ್ಲ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಶ್ರೇಷ್ಠ ಭಾಗವತರಾದ ಸತೀಶ್ ಶೆಟ್ಟಿ ಪಟ್ಲ ನುಡಿದರು.
ಪಟ್ಲ ಫೌಂಡೇಶನ್ ಗೋವಾ ರಾಜ್ಯ ಘಟಕದ ಅಧ್ಯಕ್ಷ ಗಣೇಶ್ ಶೆಟ್ಟಿರವರ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಪಟ್ಲ ಫೌಂಡೇಶನ್ ವತಿಯಿಂದ ಗೋವಾದಲ್ಲಿನ ಕನ್ನಡ ಮತ್ತು ಇತರ ಶಾಲೆಯ ಮಕ್ಕಳಿಗೂ ಯಕ್ಷ ಶಿಕ್ಷಣ ನೀಡೋಣ ಎಂದು ಸತೀಶ್ ಶೆಟ್ಟಿ ಪಟ್ಲ ನುಡಿದರು. ತುಳು ಕೂಟದ ಅಧ್ಯಕ್ಷರೂ ಆಗಿರುವ ಗಣೇಶ್ ಶೆಟ್ಟಿ ಅವರು ಸತೀಶ್ ಶೆಟ್ಟಿ ರವರಿಗೆ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಗೋವಾ ಕನ್ನಡ ಸಮಾಜ ಪಣಜಿ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ನಿಕಟ ಪೂರ್ವ ಅಧ್ಯಕ್ಷ ಮಲ್ಲಿಕಾರ್ಜುನ ಬಾದಾಮಿ ರವರು ಪಟ್ಲ ಸತೀಶ್ ಶೆಟ್ಟಿ ರವರಿಗೆ ಗೋವಾ ಕನ್ನಡ ಸಮಾಜದ ಬಗ್ಗೆ ವಿವರ ನೀಡಿದರು. ಮುಂಬರುವ ದಿನಗಳಲ್ಲಿ ಗೋವಾದಲ್ಲಿ ಗಾನ ವೈಭವ ಕಾರ್ಯಕ್ರಮ ನಡೆಸಿಕೊಡಬೇಕೆಂದು ಕೇಳಿಕೊಂಡಾಗ ಅದಕ್ಕೆ ಪಟ್ಲ ಸತೀಶ್ ಶೆಟ್ಟಿ ರವರು ಒಪ್ಪಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗೋವಾ ಕನ್ನಡ ಸಮಾಜದ ವತಿಯಿಂದ ಸತೀಶ್ ಶೆಟ್ಟಿ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸುಬ್ರಮಣ್ಯ ಶೆಟ್ಟಿ, ಜಗದೀಶ ಶೆಟ್ಟಿ, ದಿನೇಶ್ ಮೊಗವೀರ, ಶಶಿಧರ್ ರೈ, ಪ್ರಶಾಂತ್ ಶೆಟ್ಟಿ, ಶರತ್ ಶೆಟ್ಟಿ, ಗಣೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ