ಉಜಿರೆ: 2024-25ನೇ ಸಾಲಿನ ಅಂತರ್ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ ಚರ್ಚಾ ಸ್ಪರ್ಧೆ- ಕೃಷಿ ಕ್ಷೇತ್ರದ ಬೆಳವಣಿಗೆಗೆ ಸಹಕಾರ ಸಂಘಗಳ ಪಾತ್ರ ಮಹತ್ವವಾದುದಾಗಿದೆ ಎಂಬ ವಿಷಯದಲ್ಲಿ ನಮ್ಮ ಕಾಲೇಜಿನ ಪ್ರಥಮ ಬಿ.ಇಡಿ. ವಿದ್ಯಾರ್ಥಿಗಳಾದ ದೀಕ್ಷಿತ್ ಎಂ ಹಾಗೂ ಫಾತಿಮಾತ್ ರಾಫಿಯಾ ಭಾಗವಹಿಸಿದ್ದು, ಫಾತಿಮಾತ್ ರಾಫಿಯಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ರಾಜ್ಯಮಟ್ಟದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


