ಉಡುಪಿ: ಹರಿದಾಸ ಸಾಹಿತ್ಯ ಅಂತರಾಷ್ಟ್ರೀಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

Upayuktha
1 minute read
0

ಪರ್ಯಾಯ ಪುತ್ತಿಗೆ ಮಠಾಧೀಶರಿಂದ ಬಿಡುಗಡೆ |

ನ. 9 ರಿಂದ 11 ರವರೆಗೆ ನಡೆಯುವ ಶ್ರೀ ವಿಜಯ ದಾಸರ ಆರಾಧನೆ



ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರಿಗೆ ನ.9 ರಿಂದ 11 ರ ವರೆಗೆ ನಡೆಯುವ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಶ್ರೀನಿವಾಸ ಉತ್ಸವ ಬಳಗ ಬೆಂಗಳೂರು ಇದರ ಮುಖ್ಯಸ್ಥರಾದ ಶ್ರೀ ವಾದಿರಾಜ ತಾಯಲೂರು, ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ನಿರ್ದೇಶಕ ಡಾ. ಬಿ. ಗೋಪಾಲಾಚಾರ್, ಸಮ್ಮೇಳನದ ಕಾರ್ಯಕಾರಿಣಿ ಸಮಿತಿಯ ಸದಸ್ಯ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಇವರು ಉಪಸ್ಥಿತರಿದ್ದರು.


ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನ, ಶ್ರೀನಿವಾಸ ಉತ್ಸವ ಬಳಗ ಮತ್ತು ಹಲವು ಸಹೃದಯಿ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿರುವ ಹರಿದಾಸ ಸಾಹಿತ್ಯ ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ವಿಜಯದಾಸರ ಆರಾಧನಾ ಮಹೋತ್ಸವಕ್ಕೆ ಶ್ರೀ ವಿಜಯದಾಸರ ಅಂತರ್ಯಾಮಿ ಮಧ್ವಾಂತರ್ಗತ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ಅನುಗ್ರಹ ದಿಂದ ಈ ಕಾರ್ಯ ಯಶಸ್ವಿಯಾಗಿ ನೆರವೇರಲಿ ಎಂದು ಶ್ರೀಪಾದರು ಹಾರೈಸಿ ಸಕಲ ಸದ್ಭಕ್ತರಿಗೆ ಆಹ್ವಾನ ನೀಡಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top