ಮಂಗಳೂರು: ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ ಅವರ ಮೇಲೆ ದ್ವೇಷ ಭಾಷಣ, ಕೋಮು ಪ್ರಚೋದನೆ ಆರೋಪ ಹೊರಿಸಿ ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವುದು ರಾಜ್ಯ ಸರ್ಕಾರವನ್ನು ತೃಪ್ತಿಪಡಿಸಲು ಹೊರಟಿರುವ ಲಕ್ಷಣವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಡಾ.ಅರುಣ್ ಉಳ್ಳಾಲ ಅವರು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ? ಹಿಂದೂಗಳು ವಿದ್ಯಾರ್ಜನೆಗೆ ಹಿಂದೂ ವಿದ್ಯಾಸಂಸ್ಥೆಗಳನ್ನು, ಮದುವೆಯಂತಹ ಶುಭ ಸಮಾರಂಭಗಳಿಗೆ ಹಿಂದೂ ಕಲ್ಯಾಣ ಮಂಟಪಗಳನ್ನು ಬಳಸಬೇಕು ಎನ್ನುವುದು ಯಾವ ರೀತಿಯಲ್ಲಿ ದ್ವೇಷ ಭಾಷಣ? ಯಾವ ರೀತಿಯಲ್ಲಿ ಕೋಮು ಪ್ರಚೋದನೆ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳು ಹಿಂದೂ ಸಮಾಜವನ್ನು ಜಾಗೃತಗೊಳಿಸುವುದನ್ನೇ ನಿಷೇಧಿಸಲಾಗಿದೆಯೇ? ರಾಜ್ಯದ ಗೌರವಾನ್ವಿತ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ ಎಂದು ದ್ವೇಷ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸಿಕೊಳ್ಳದವರು ಇಂದು ತೋರಿರುವ ಉತ್ಸಾಹವನ್ನು ಗಮನಿಸಿದಾಗ ಇದರ ಹಿಂದೆ ಹಿಂದೂ ಪರ ಧ್ವನಿಯನ್ನು ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರದ ಛಾಯೆ ಇರುವುದಂತೂ ಸ್ಪಷ್ಟ ಎಂದರು.
ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೇಸು ದಾಖಲಿಸುವುದು, ದಬ್ಬಾಳಿಕೆ ನಡೆಸುವುದು, ಬೆದರಿಸುವುದನ್ನು ಬಿಜೆಪಿ ಸಹಿಸುವುದಿಲ್ಲ. ಈ ಕೂಡಲೇ ಡಾ. ಅರುಣ್ ಉಳ್ಳಾಲ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕೆಂದು ಶಾಸಕರು ಆಗ್ರಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

