ಗೃಹರಕ್ಷಕ ದಳ ಕಚೇರಿಯಲ್ಲಿ ಜಾಗೃತಿ ಅರಿವು ಸಪ್ತಾಹ-2024

Upayuktha
0

 


ಮಂಗಳೂರು: ನಿನ್ನೆ ಸೋಮವಾರದಂದು ಗೃಹರಕ್ಷಕದಳ ಕೇಂದ್ರ ಕಚೇರಿಯ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಭ್ರಷ್ಟಾಚಾರದ ವಿರುದ್ಧ ‘ಜಾಗೃತಿ ಅರಿವು ಸಪ್ತಾಹ-2024’ ಇದರ ಅಂಗವಾಗಿ  ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧರಾಗಿರುವುದಾಗಿ ಹಾಗೂ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಹೋರಾಟವನ್ನು ಬೆಂಬಲಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಸಮ್ಮುಖದಲ್ಲಿ “ಜಾಗೃತಿ ಅರಿವು ಸಪ್ತಾಹ-2024”ವನ್ನು ಆಚರಿಸಲಾಯಿತು. 


ಭ್ರಷ್ಟಾಚಾರ ನಿರ್ಮೂಲನಾ ಪ್ರತಿಜ್ಞೆಯಲ್ಲಿ ಕಛೇರಿಯ ಅಧೀಕ್ಷಕ  ಎನ್. ಚಂದ್ರ , ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ಸಿಬ್ಬಂದಿ ದಲಾಯತ್ ಮಂಜುಳಾ ಲಮಾಣಿ ಮತ್ತು ಗೃಹರಕ್ಷಕರಾದ ಸಂಜಯ್, ಸುಲೋಚನ, ನಿಶಾ ಇವರುಗಳು ಪ್ರತಿಜ್ಞೆಯನ್ನು ಮಾಡಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top