ಬಂಟ್ವಾಳ: ಕನ್ನಡ ಭಾಷಾ ಶಿಕ್ಷಕರಿಗೆ ಭಾಷಾ ಕಾರ್ಯಾಗಾರ

Chandrashekhara Kulamarva
0


ಬಂಟ್ವಾಳ: ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ  ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ  ಅನಿವಾರ್ಯತೆ ಕನ್ನಡಿಗರಾದ ನಮಗೆ ಉಂಟಾಗಿದೆ. 


ಆ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಶ್ರೇಷ್ಠವಾದದ್ದು "ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ತುಕರಾಂ ಪೂಜಾರಿ ಬಂಟ್ಟಾಳ ಇವರು  ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರಿಗೆ ಜರುಗಿದ ಕನ್ನಡ ಭಾಷಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಭಿಪ್ರಾಯಪಟ್ಟರು.


ಕಾರ್ಯಾಗಾರದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್ ನೆರವೇರಿಸಿ " ಕನ್ನಡ ಮಾತೃಭಾಷೆಯನ್ನು ಪ್ರೀತಿಸಬೇಕು. ಕನ್ನಡದ ಬಳಕೆಯನ್ನು ಬೆಳೆಸಬೇಕು. ಆ ನಿಟ್ಟಿನಲ್ಲಿ ಕನ್ನಡ ಭಾಷಾ ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು " ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ಟಾಳ ವಹಿಸಿದರು.  ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರಾದ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ವಿ ಸು ಭಟ್ ಇವರು ಸ್ವಾಗತಿಸಿದರು. ಗೌರವ  ಕಾರ್ಯದರ್ಶಿಗಳಾದ ಶ್ರೀ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top