ಪಾಂಗೋಡು ಕ್ಷೇತ್ರ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಕುಳಮರ್ವ ದಂಪತಿಗೆ ಸನ್ಮಾನ

Upayuktha
0


ಕಾಸರಗೋಡು: ಕನ್ನಡ ಭವನ ಗ್ರಂಥಾಲಯ ಕಾಸರಗೋಡು ಮತ್ತು ಶಿವಗಿರಿ ಸಾಹಿತ್ಯ ವೇದಿಕೆ ಅಡೂರು ಇದರ ಸಹಯೋಗದಲ್ಲಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.


ಇದರಂಗವಾಗಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ ಸಮಿತಿ ವತಿಯಿಂದ ಹಿರಿಯ ಸಾಹಿತಿ, ನಿವೃತ್ತ ಶಿಕ್ಷಕ ವಿ.ಬಿ ಕುಳಮರ್ವ, ಲಲಿತಾಲಕ್ಷ್ಮಿ ಕುಳಮರ್ವ ದಂಪತಿಗಳಿಗೆ ಕಾಸರಗೋಡು ದಸರಾ ಸನ್ಮಾನ ನಡೆಯಿತು. ಕುಳಮರ್ವ ದಂಪತಿಗಳಿಗೆ ಕನ್ನಡ ಭವನ ಮತ್ತು ಗ್ರಂಥಾಲಯದ ಅಧ್ಯಕ್ಷ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಅಭಿನಂದಿಸಿದರು.


ಅಡೂರು ಶಿವಗಿರಿ ಸಾಹಿತ್ಯ ವೇದಿಕೆಯ ಅಧ್ಯಕ್ಷ ವಿರಾಜ್ ಅಡೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಭವನ ಗ್ರಂಥಾಲಯದ ಅಧ್ಯಕ್ಷ ವಾಮನ ರಾವ್ ಬೇಕಲ್ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಧನ್ಯವಾದ ಸಮರ್ಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top