ಮಹಾರಾಷ್ಟ್ರ ಚುನಾವಣೆ: ಪುಣೆ ಜಿಲ್ಲಾ ಬಿಜೆಪಿ ಸಭೆಯಲ್ಲಿ ಶಾಸಕ ಕಾಮತ್ ಭಾಗಿ

Upayuktha
0

ಮಂಗಳೂರು: ಮುಂಬರಲಿರುವ ಮಹಾರಾಷ್ಟ್ರ ಚುನಾವಣೆಯ ಅಂಗವಾಗಿ ಪ್ರವಾಸಿ ಕಾರ್ಯಕರ್ತರ ಸಂಯುಕ್ತ ಸಭೆಯು ಪುಣೆಯ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದಿದ್ದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದ್ದರು.


ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷ ವಹಿಸಿರುವ ಜವಾಬ್ದಾರಿಯಂತೆ ಪುಣೆಗೆ ತೆರಳಿರುವ ಅವರು "ಪ್ರಸ್ತುತ ಭಾರತೀಯ ಜನತಾ ಪಾರ್ಟಿಗೆ ಪುಣೆ ಸೇರಿದಂತೆ ಇಡೀ ರಾಜ್ಯದಲ್ಲಿ ಪೂರಕ ವಾತಾವರಣವಿದ್ದು ಮತ್ತೆ ನಮ್ಮ ಪಕ್ಷ ಪೂರ್ಣ ಬಹುಮತದಿಂದ ಅಧಿಕಾರಕ್ಕೇರುವುದು ಖಚಿತ. ಆ ನಿಟ್ಟಿನಲ್ಲಿ ಪಕ್ಷದ ಮಾರ್ಗದರ್ಶನದಂತೆ ನಾವೆಲ್ಲರೂ ಕಾರ್ಯ ನಿರ್ವಹಿಸಲಿದ್ದೇವೆ ಎಂದರು.


ಈ ಸಂದರ್ಭದಲ್ಲಿ ಸ್ಥಳೀಯ ನಾಯಕರ ಜೊತೆಗೆ ಕರ್ನಾಟಕದ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top