ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಾಧ್ಯಮ ಕಾರ್ಯಾಗಾರ

Chandrashekhara Kulamarva
0


ಮಂಗಳೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ, ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ, ಮೀಡಿಯಾ ಕ್ರಿಯೇಷನ್ಸ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಮಾಧ್ಯಮ  ಸಂವಾದ ಕಾರ್ಯಾಗಾರ  ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ನಡೆಯಿತು.


ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ ಪ್ರಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಂಗಳೂರು ನಗರದ ಅಭಿವೃದ್ಧಿ ಸ್ವಚ್ಛತೆಗೆ ಎಲ್ಲರ ಸಹಕಾರ ಅಗತ್ಯ ಮಾಧ್ಯಮಗಳು ಸಮಾಜದ ಪ್ರಮುಖ ಅಂಗ ಎಂದು ಶುಭ ಹಾರೈಸಿದರು.


ಮುಖ್ಯ ಅತಿಥಿ ಯಾಗಿ ಭಾಗವಹಿಸಿದ ಮಂಗಳೂರು ಮಹಾ ನಗರ ಪಾಲಿಕೆ ಉಪ ಆಯುಕ್ತ ಚಂದ್ರಶೇಖರ್ ಮಾತನಾಡಿ, ಸಮಾಜದ ಬದಲಾವಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ಇದೆ. ವಿದ್ಯಾರ್ಥಿಗಳು ಪ್ರತಿನಿತ್ಯ ಪತ್ರಿಕೆಗಳನ್ನು ಓದುವುದರ ಮೂಲಕ ಸಮಾಜದ ಆಗು ಹೋಗುಗಳನ್ನು ತಿಳಿದು ಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಸಮಾರಂಭದಲ್ಲಿ ರೋಟರಿ ಕ್ಲಬ್ ಮಂಗಳೂರು  ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ, ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ  ನ್ಯಾಕ್ ಸಂಯೋಜಕಿ ಡಾ.ಮಂಜುಳಾ, ಟೆಕ್ನೊ ಪ್ರೊ ಸಾಫ್ಟ್‌ವೇರ್ ನಿರ್ದೇಶಕ ಜಿ.ಕೆ.ಭಟ್ ಉಪಸ್ಥಿತರಿದ್ದರು. 


ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.


ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top