ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2024 ರ ಕಿರೀಟ

Upayuktha
0

 



ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡವು ಪಿಲಿಪರ್ಬ- 2024 ರ ಕಿರೀಟ ಮುಡಿಗೇರಿಸಿಕೊಂಡಿತು.


ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡವು ಪಡೆದುಕೊಂಡರೆ, ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಹಾಗೂ ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡಗಳು ಜಂಟಿಯಾಗಿ ತೃತೀಯ ಸ್ಥಾನವನ್ನು ಅಲಂಕರಿಸಿದವು.


ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಟ್ಯಾಲೆಂಟ್ ಟೈಗರ್ಸ್ ತುಳುನಾಡು ತಂಡ ಪಡೆದುಕೊಂಡರೆ, ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡವು "ಮರಿ ಹುಲಿ" ಪ್ರಶಸ್ತಿಯನ್ನು ಹಾಗೂ ಬಹುನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡ ಪಡೆದುಕೊಂಡಿತು.


ಶಿಸ್ತಿನ ತಂಡವಾಗಿ ಟೀಮ್ ಪರಶುರಾಮ್ ಕುಡ್ಲ ಹೊರ ಹೊಮ್ಮಿದರೆ, ಬಣ್ಣಗಾರಿಕೆ ಹಾಗೂ ಮೆರವಣಿಗೆ ವಿಭಾಗದ ದ್ವಿತೀಯ ಬಹುಮಾನವನ್ನು ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಪಡೆಯಿತು.


ಮುಡಿ ವಿಭಾಗದಲ್ಲಿ ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ಮೆರವಣಿಗೆ ವಿಭಾಗದ ಪ್ರಥಮ ಸ್ಥಾನವನ್ನು ಎಮ್.ಎಫ್.ಟಿ ಮುಳಿಹಿತ್ಲು, ಹಿಮ್ಮೇಳ ವಿಭಾಗದಲ್ಲಿ ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ಪ್ರಶಸ್ತಿಗಳನ್ನು ಬಾಚಿಕೊಂಡಿತು. ಕೊನೆಯದಾಗಿ ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರೋತ್ಸಾಹ ಧನ ನೀಡಿ ಗೌರವಿಸುವ ಮೂಲಕ ಮೂರನೇ ಆವೃತ್ತಿಯ ಪಿಲಿಪರ್ಬಕ್ಕೆ ತೆರೆ ಬಿದ್ದಿತು. 


ನಟ-ನಿರ್ದೇಶಕ-ರಾಷ್ಟ್ರಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ, ರಾಜ್ ಬಿ.ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಹಾಗೂ ಜನಪ್ರಿಯ ನಟರಾದ ಅರ್ಜುನ್ ಕಾಪಿಕಾಡ್, ವಿನೀತ್ ಕುಮಾರ್, ಸಮತಾ ಅಮೀನ್, ಸೇರಿದಂತೆ ಅನೇಕ ಚಿತ್ರ ತಾರೆಯರ ದಂಡು ಕಾರ್ಯಕ್ರಮದ ಮೆರುಗು ಹೆಚ್ಚಿಸಿತ್ತು. 


ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ ಸೇರಿದಂತೆ ಹಲವು ಗಣ್ಯರು ಸಂಭ್ರಮದ ಪಿಲಿಪರ್ಬಕ್ಕೆ ಸಾಕ್ಷಿಯಾದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top