ರಾಷ್ಟ್ರೀಯ ಸೇವಾ ಯೋಜನಾ ಘಟಕ-ಕಾರ್ಯಚಟುವಟಿಕೆಯ ಉದ್ಘಾಟನೆ

Upayuktha
0


ಸುರತ್ಕಲ್‌: 
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಮಾನವೀಯತೆಯನ್ನು ಅಳವಡಿಸಿಕೊಂಡು ಸೌಹಾರ್ಧತೆ - ಸ್ವಚ್ಛ-ಸುಂದರ-ಆರೋಗ್ಯಪೂರ್ಣ ಸಮಾಜ    ನಿರ್ಮಾಣದ ರೂವಾರಿಗಳಾಗಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿ ಕೊಡುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಶೇಷಪ್ಪ ಅಮೀನ್ ಅಭಿಪ್ರಾಯಪಟ್ಟರು.


ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25ನೇ ಸಾಲಿನ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿ ಸಮುದಾಯದ ಸಾಮಾಜಿಕ ಜೀವನದ ಮೊದಲ ಹೆಜ್ಜೆಯಾಗಿದ್ದು ಸಾಮಾಜಿಕ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ಶಿಸ್ತು, ಕರ್ತವ್ಯ ನಿಷ್ಠತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ಕಲಿಸಿಕೊಡುವ ಮೂಲಕ ಸತ್ಪ್ರಜೆಗಳನ್ನು ರೂಪಿಸುವ ಕಾರ‍್ಯ ನಡೆಸುತ್ತಿದೆಂದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಮರುರೂಪುಗೊಂಡ ಕಾಲೇಜಿನ ಶಾರದಾ ಪೀಠ ಸಾಂಸ್ಕೃತಿಕ ವೇದಿಕೆಯನ್ನು ಉದ್ಘಾಟಿಸಲಾಯಿತು.


ಸ್ವಚ್ಛತೆಯ ಕುರಿತಾದ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಅಕ್ಷತಾ ವಿ. ಸ್ವಾಗತಿಸಿ ಡಾ. ಭಾಗ್ಯಲಕ್ಷ್ಮೀ ಎಂ. ವಂದಿಸಿದರು. ಎನ್.ಎಸ್.ಎಸ್. ಸ್ವಯಂ ಸೇವಕಿ ಪ್ರಾಪ್ತಿ ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ. ಮತ್ತಿರರು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಭೂಷಣ್, ರಕ್ಷಿತಾ, ಜೀವನ್, ತೇಜಸ್ವಿನಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top