ಸುರತ್ಕಲ್: ಸಂಗೀತದ ಮೂಲಕ ದೈವತ್ವದ ಅನುಭೂತಿಯನ್ನು ಪಡೆಯಬಹುದು. ಶಕ್ತಿಸ್ವರೂಣಿಯರ ಆರಾಧನೆಯ ಕಾಲವಾದ ನವರಾತ್ರಿಯ ಆಚರಣೆಯಲ್ಲಿ ಸಂಗೀತವೂ ಮಹತ್ವವನ್ನು ಪಡೆದಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥೆ ಡಾ. ಸಾಯಿಗೀತಾ ನುಡಿದರು. ಅವರು ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ) ಮತ್ತು ನಾಗರಿಕ ಸಲಹಾ ಸಮಿತಿ (ರಿ) ಸುರತ್ಕಲ್ ಸಹಯೋಗದಲ್ಲಿ ಶ್ರೀ ವಿಶ್ವೇಶತೀರ್ಥ ಸಭಾಂಗಣ “ಅನುಪಲ್ಲವಿ’ ಯಲ್ಲಿ ನವರಾತ್ರಿಯ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸಂಗೀತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿ, ಯುವ ಕಲಾವಿದರು ತಮ್ಮ ಶ್ರದ್ಧೆ ಮತ್ತು ಬದ್ಧತೆಯಿಂದ ಪ್ರತಿಭಾವಂತ ಕಲಾವಿದರಾಗಿ ರೂಪುಗೊಳ್ಳುತ್ತಿದ್ದಾರೆ ಎಂದರು.
ವಿದುಷಿ ನಮೃತಾ ಎಸ್, ಚೆನ್ನೈಯವರ ಹಾಡುಗಾರಿಕೆ ನಡೆಸಿಕೊಟ್ಟರು. ವಯಲಿನ್‌ನಲ್ಲಿ ಅನನ್ಯ ಪಿ.ಎಸ್. ಮತ್ತು ಮೃದಂಗದಲ್ಲಿ ಅಚಿಂತ್ಯಕೃಷ್ಣ ಪುತ್ತೂರು ಸಹಕರಿಸಿದರು.
ಮಣಿಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಸ್ವಾಗತಿಸಿದರು. ಗೋವಿಂದ ದಾಸ ಕಾಲೇಜು ಸುರತ್ಕಲ್‌ನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ, ಸಂಗೀತ ಗುರುಗಳಾದ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ